1st PUC Free Admission 2026: ಪ್ರಥಮ ಪಿಯುಸಿ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

Telegram Group Join Now
WhatsApp Group Join Now

2026-27 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ (1st PUC) ತರಗತಿಗಳಿಗೆ ಉಚಿತ ಪ್ರವೇಶಾತಿಗಾಗಿ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ (Directorate of Minorities) ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಪದವಿ ಪೂರ್ವ ಕಾಲೇಜುಗಳು ಹಾಗೂ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ತರಗತಿಗಳಿಗೆ ಉಚಿತ ಪ್ರವೇಶಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಪ್ರಮುಖ ದಿನಾಂಕಗಳು ಹಾಗೂ ವೆಬ್‌ಸೈಟ್ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಮುಖಾಂತರವೇ ಅರ್ಜಿ ಸಲ್ಲಿಸಬೇಕಾಗುತ್ತದೆ.

ಯಾರು ಅರ್ಜಿ ಸಲ್ಲಿಸಬಹುದು?
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಕೆಳಗಿನ ಮಾನದಂಡಗಳನ್ನು ಪೂರೈಸಿರಬೇಕು:

  • ಕರ್ನಾಟಕ ರಾಜ್ಯದ ಎಸ್‌ಎಸ್‌ಎಲ್‌ಸಿ (SSLC) ಅಥವಾ COBSE ಪಟ್ಟಿಯಲ್ಲಿರುವ ಬೋರ್ಡ್‌ಗಳಲ್ಲಿ ತೇರ್ಗಡೆಯಾಗಿರಬೇಕು.
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯವು 2.50 ಲಕ್ಷ ರೂ. ಗಳನ್ನು ಮೀರಿರಬಾರದು.

ಪ್ರವೇಶಾತಿಯಲ್ಲಿ ಮೀಸಲಾತಿ ವಿವರ: ಈ ಕಾಲೇಜುಗಳಲ್ಲಿ ಕೇವಲ ಅಲ್ಪಸಂಖ್ಯಾತರಿಗೆ ಮಾತ್ರವಲ್ಲದೆ, ಇತರೆ ವರ್ಗದ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದ್ದು, ಸೀಟುಗಳ ಹಂಚಿಕೆ ಈ ಕೆಳಗಿನಂತಿದೆ:

  • ಶೇ. 75 ರಷ್ಟು ಸೀಟುಗಳು: ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಮೀಸಲು.
  • ಶೇ. 25 ರಷ್ಟು ಸೀಟುಗಳು: ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರೆ ಹಿಂದುಳಿದ ವರ್ಗಗಳ (OBC) ವಿದ್ಯಾರ್ಥಿಗಳಿಗೆ ಮೀಸಲು.
  • ವಿಶೇಷ ಚೇತನ ವಿದ್ಯಾರ್ಥಿಗಳಿಗೆ: ಒಟ್ಟು ಪ್ರವೇಶಾತಿಯಲ್ಲಿ ಶೇ. 4 ರಷ್ಟು ಸ್ಥಾನಗಳನ್ನು ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಮೀಸಲಿಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಎಲ್ಲಿ ಸಂಪರ್ಕಿಸಬೇಕು? ಅರ್ಜಿ ಸಲ್ಲಿಕೆ ಕುರಿತು ಅಥವಾ ಕಾಲೇಜುಗಳ ಕುರಿತು ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ, ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಕಚೇರಿ (ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ), ತಾಲೂಕು ಮಾಹಿತಿ ಕೇಂದ್ರಗಳು ಅಥವಾ ಸಮೀಪದ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು.

  • ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 24.04.2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.05.2026
  • ಇಲಾಖೆಯ ಸಹಾಯವಾಣಿ ಸಂಖ್ಯೆ (Helpline): 8277799990

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: dom.karnataka.gov.in

ಜಿಲ್ಲಾ ನ್ಯಾಯಾಲಯ ನೇಮಕಾತಿ 2026

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment