New Ration Card: ಹೊಸ ರೇಷನ್‌ ಕಾರ್ಡ್‌ ಆನ್‌ಲೈನ್‌ ಅರ್ಜಿ ಆಹ್ವಾನ, ಈ ದಾಖಲೆ ಕಡ್ಡಾಯ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ಗುಡ್ ನ್ಯೂಸ್. ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕೆ..? ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕಾಗುತ್ತವೆ ಎಂದು ತಿಳಿದಿಲ್ಲವೇ..? ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಎಷ್ಟು ದಿನಗಳ‌ ಕಾಲಾವಕಾಶ ಇದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.

ರೇಷನ್ ಕಾರ್ಡ್ ಅನ್ನು ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡುತ್ತದೆ. ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳಿಗೆ ಪ್ರತಿ ತಿಂಗಳು ಉಚಿತವಾಗಿ ಪಡಿತರವನ್ನು ನೀಡುತ್ತಾರೆ ಹಾಗೂ ಸರ್ಕಾರವು ನೀಡುತ್ತಿರು ಎಲ್ಲಾ ಯೋಜನೆಗಳ ಸೌಲಭ್ಯಗಳು ಸಹ ಉಚಿತವಾಗಿ ದೊರೆಯುತ್ತದೆ. ಆಹಾರ ಇಲಾಖೆಯು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಯಾರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ ಅಂತವರು ಕೂಡಲೇ ಹೋಗಿ ಅರ್ಜಿ ಸಲ್ಲಿಸಬಹುದು.

ರೇಷನ್ ಕಾರ್ಡ್ ಅನ್ನು ಹೊಂದಿರುವ ಕುಟುಂಬದ ಫಲಾನುಭವಿಗಳಿಗೆ ಸರ್ಕಾರವು ನೀದುತ್ತಿರುವ ವೈದ್ಯಕೀಯ ಸೇವೆಗಳು ಸೇರಿಂದ ಹಲವಾರು ಯೋಜನೆಗಳ ಲಾಭವನ್ನು ಸಹ ನೀವು ಪಡೆದುಕೊಳ್ಳಬಹುದಾಗಿದೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕಾಗುತ್ತವೆ ಹಾಗೂ ಯಾವೇಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಗಮನಿಸಿ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು:

  • ರೇಷನ್ ಕಾರ್ಡ್ ಇಲ್ಲದವರು ಅರ್ಜಿ ಸಲ್ಲಿಸಬಹುದು.
  • ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಹೊಸದಾಗಿ ಮದುವೆಯಾದ ದಂಪತಿಗಳು ಅರ್ಜಿ ಸಲ್ಲಿಸಬಹುದು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯದ ಮೇಲೆ ರೇಷನ್ ಕಾರ್ಡ್ ಅನ್ನು BPL, ಹಾಗೂ APL ಎಂಬುದು ನಿರ್ಧರಿತವಾಗಿರಲಿದೆ.

BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:

  • ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಮೊಬೈಲ್ ನಂಬರ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • 6 ವರ್ಷ ವಯಸ್ಸಿನ ಮಕ್ಕಳ ಜನನ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳು.

APL ಹಾಗೂ BPL ಪಡಿತರ ಚೀಟಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, 17-04-2025 ರಿಂದ 18-04-2025 ರ ವರೆಗೆ ಎರಡು ದಿನ ಮಾತ್ರ ಕಾಲಾವಕಾಶವಿದ್ದು, ಸಮಯ ಮಧ್ಯಾಹ್ನ 1 ರಿಂದ 3 ಗಂಟೆ ವರೆಗೆ ಮಾತ್ರ. ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಎಲ್ಲರೂ ಹೆಬ್ಬೆಟ್ಟು (TUMB) ಕೊಡಲು ಬರಬೇಕು.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ..?
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರದ CSC ಕೇಂದ್ರ ಅಥವಾ ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದೆ ರೀತಿ ಸರ್ಕಾರಿ ಯೋಜನೆ ಮತ್ತು ರೇಷನ್‌ ಕಾರ್ಡ್‌ ಸಂಬಂಧಿತ ಮಾಹಿತಿಗಳಿಗಾಗಿ Hosamahiti.com ಗೆ ಭೇಟಿ ನೀಡಿ.

New Ration Card Online Application Link: Click Here

Telegram Group Join Now
WhatsApp Group Join Now

Leave a Comment