Indira Kit Scheme: ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಗುಡ್ ನ್ಯೂಸ್; ತೊಗರಿ ಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ವಿತರಣೆ

Telegram Group Join Now
WhatsApp Group Join Now

ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಗುಡ್ ನ್ಯೂಸ್. ಅನ್ನಭಾಗ್ಯ ಯೋಜನೆಯಡಿಯಲ್ಲಿ ಹೆಚ್ಚುವರಿಯಾಗಿ ನೀಡುತ್ತಿರುವ 5Kg ಅಕ್ಕಿಯ ಬದಲು ಪ್ರತಿ ಪಡಿತರ ಚೀಟಿಗೆ ಇಂದಿರಾ ಆಹಾರ ಕಿಟ್ ವಿತರಣೆ (Indira Kit Scheme) ಮಾಡಲು ರಾಜ್ಯ ಸರ್ಕಾರದಿಂದ ಭರ್ಜರಿ ತಯಾರಿ.

ಇಂದಿರಾ ಆಹಾರ ಕಿಟ್ ವಿತರಣಾ ಯೋಜನೆಯನ್ನು ಜನವರಿ ಅಥವಾ ಫೆಬ್ರುವರಿ ತಿಂಗಳಿನಲ್ಲಿ ಜಾರಿಗೊಳಿಸಲು ತಯಾರಿ ಮಾಡಿಕೊಂಡಿದ್ದೇವೆ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಹೇಳಿದ್ದಾರೆ.

Indira Kit Scheme: ಇಂದಿರಾ ಕಿಟ್ ನಲ್ಲಿ ಏನೆಲ್ಲಾ ಇರಲಿದೆ..?

  • ತೊಗರಿ ಬೇಳೆ
  • ಅಡುಗೆ ಎಣ್ಣೆ
  • ಸಕ್ಕರೆ
  • ಉಪ್ಪು

ಪಡಿತರ ಚೀಟಿದಾರರ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಇಂದಿರಾ ಕಿಟ್ ಅನ್ನು ಮೂರು ವಿಭಾಗಗಳಾಗಿ ವಿಂಗಡಿಸಿದ್ದಾರೆ. ಒಬ್ಬರು ಅಥವಾ ಇಬ್ಬರು ಸದಸ್ಯರಿದ್ದರೆ ಕಿಟ್‌ನಲ್ಲಿ 750 ಗ್ರಾಂ ತೊಗರಿ ಬೇಳೆ, ಅರ್ಧ ಲೀಟರ್‌ ಅಡುಗೆ ಎಣ್ಣೆ, ಅರ್ಧ ಕಿಲೋ ಸಕ್ಕರೆ ಮತ್ತು ಉಪ್ಪು ನೀಡುತ್ತಾರೆ.

ಮೂವರು ಅಥವಾ ನಾಲ್ವರು ಸದಸ್ಯರಿದ್ದರೆ ಒಂದೂವರೆ ಕಿಲೋ ಗ್ರಾಂ ತೊಗರಿ ಬೇಳೆ, ಒಂದು ಲೀಟರ್‌ ಅಡುಗೆ ಎಣ್ಣೆ, ಒಂದು ಕಿಲೋ ಸಕ್ಕರೆ ಮತ್ತು ಉಪ್ಪು ಇಂದಿರಾ ಕಿಟ್ ನಲ್ಲಿ ಇರಲಿದೆ.

ಐದು ಜನ ಅಥವಾ ಅದಕ್ಕಿಂತ ಹೆಚ್ಚು ಸದಸ್ಯರಿದ್ದರೆ 2Kg, 250 ಗ್ರಾಂ ತೊಗರಿ ಬೇಳೆ, ಒಂದೂವರೆ ಲೀಟರ್‌ ಅಡುಗೆ ಎಣ್ಣೆ, ಒಂದೂವರೆ ಕಿಲೋ ಸಕ್ಕರೆ ಮತ್ತು ಉಪ್ಪು ವಿತರಿಸಲಾಗುವುದು. ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ಈ ಕಿಟ್‌ ಫಲಾನುಭವಿಗಳ ಕೈ ಸೇರುವ ಸಾಧ್ಯತೆಯಿದೆ.

ಗೃಹಲಕ್ಷ್ಮಿ ಯೋಜನೆಯ 2 ತಿಂಗಳ 4,000 ರೂ. ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

CIBIL Score: ಗುಡ್‌ ನ್ಯೂಸ್; ಸಿಬಿಲ್ ಸ್ಕೋರ್ ಇಲ್ಲದೆಯೂ ಸಾಲ ಪಡೆಯಬಹುದು: ಹಣಕಾಸು ಸಚಿವಾಲಯ

ಉಚಿತ ಹೊಲಿಗೆ ಯಂತ್ರ ಯೋಜನೆ 2025; ಅರ್ಹರಿಂದ ಆನ್‌ಲೈನ್‌ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment