ಕಾರ್ಮಿಕರ ಮಕ್ಕಳಿಗೆ 20,000 ರೂ. ವಿದ್ಯಾರ್ಥಿವೇತನ; ಅರ್ಜಿ ಆಹ್ವಾನ | Karnataka Labour Welfare Board Scholarship 2025 Apply Online @ klwbapps.karnataka.gov.in

Telegram Group Join Now
WhatsApp Group Join Now

ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್. 6,000 ರೂ. ರಿಂದ 20,000 ರೂ. ವರೆಗೆ ವಿದ್ಯಾರ್ಥಿವೇತನ. ಹೈಸ್ಕೂಲ್ ನಿಂದ ಹಿಡಿದು ಮೆಡಿಕಲ್/ಇಂಜಿನಿಯರಿಂಗ್ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ನ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ರಾಜ್ಯದ ಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಲು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26 ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಅರ್ಹತೆ:

ವಿದ್ಯಾರ್ಥಿಯ ಪೋಷಕರು ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿಗೆ ವಂತಿಕೆ ನೀಡುತ್ತಿರುವ ಸಂಘಟಿತ ಕಾರ್ಮಿಕರಾಗಿರಬೇಕು.

ಆದಾಯ ಮಿತಿ: ವಿದ್ಯಾರ್ಥಿಯ ಪೋಷಕರ ಮಾಸಿಕ ವೇತನ 35,000 ರೂ. ಮೀರಿರಬಾರದು.
ಹಿಂದಿನ ತರಗತಿಯಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಶೇ.50 ರಷ್ಟು ಮತ್ತು SC/ST ವಿದ್ಯಾರ್ಥಿಗಳು ಶೇ.45 ರಷ್ಟು ಅಂಕ ಪಡೆದು ಪಾಸಾಗಿರಬೇಕು. ಒಂದು ಕುಟುಂಬದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಸಿಗಲಿದೆ.

KLWB Scholarship 2025 ವಿದ್ಯಾರ್ಥಿಗಳಿಗೆ ಸಿಗುವ ಸಹಾಯಧನ:

  • 8ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ: 6,000 ರೂ.
  • ಪಿಯುಸಿ, ಐಟಿಐ, ಡಿಪ್ಲೋಮಾ, ಟಿಸಿಎಚ್ ವಿದ್ಯಾರ್ಥಿಗಳಿಗೆ: 8,000 ರೂ.
  • ಪದವಿ ವಿದ್ಯಾರ್ಥಿಗಳಿಗೆ: 10,000 ರೂ.
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ: 12,000 ರೂ.
  • ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ: 20,000 ರೂ‌.

ಬೇಕಾಗುವ ದಾಖಲೆಗಳು:

  • SSLC ಅಂಕಪಟ್ಟಿ
  • PUC ಅಂಕಪಟ್ಟಿ
  • ವಿದ್ಯಾರ್ಥಿ, ತಂದೆ ಮತ್ತು ತಾಯಿ- ಈ 3 ಜನರ ಆಧಾರ್ ಕಾರ್ಡ್ ಕಡ್ಡಾಯವಾಗಿ ಬೇಕು.
  • ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿ (Account Number ಮತ್ತು IFSC Code ಸ್ಪಷ್ಟವಾಗಿ ಕಾಣಬೇಕು)
  • ಹಿಂದಿನ ವರ್ಷದ ಅಂಕಪಟ್ಟಿ ಪದವಿ/ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಿಂದಿನ ಎರಡು ಸೆಮಿಸ್ಟರ್‌ಗಳ ಅಂಕಪಟ್ಟಿಯನ್ನು ಕಡ್ಡಾಯವಾಗಿ ನೀಡಬೇಕು
  • ತಂದೆ ಅಥವಾ ತಾಯಿ ಮರಣ ಹೊಂದಿದ್ದಲ್ಲಿ, ಮರಣ ಪ್ರಮಾಣ ಪತ್ರ

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2025

KLWB Scholarship 2025-26 Online Application Link:
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: klwbapps.karnataka.gov.in, klwb.karnataka.gov.in

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಗಳು: 080-23475188, 8277291175, 9141602562 ಅನ್ನು ಸಂಪರ್ಕಿಸಬಹುದು.

ವಿದ್ಯಾಸಿರಿ ವಿದ್ಯಾರ್ಥಿವೇತನ 2025-26; ಆನ್‌ಲೈನ್ ಅರ್ಜಿ ಸಲ್ಲಿಸಿ

NSP Scholarship 2025-26: ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment