ವಿದ್ಯಾಸಿರಿ ವಿದ್ಯಾರ್ಥಿವೇತನ 2025-26; ಆನ್‌ಲೈನ್ ಅರ್ಜಿ ಸಲ್ಲಿಸಿ | Vidyasiri Scholarship Apply Online 2026 Last Date To Apply

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ವಿದ್ಯಾಸಿರಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ..? ಯಾರು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಯಾವಾಗ..? ಹಾಗೂ ಯಾವೇಲ್ಲಾ ದಾಖಲೆಗಳು ಬೇಕಾಗುತ್ತದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26 ನೇ ಸಾಲಿನ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಕರೆಯಲಾಗಿದೆ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Vidyasiri Scholarship ಯಾರು ಅರ್ಜಿ ಸಲ್ಲಿಸಬಹುದು?
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾಸಿರಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು. PUC ಮತ್ತು ಸಾಮಾನ್ಯ ಪದವಿ ವಿದ್ಯಾರ್ಥಿಗಳಿಗೆ ಈ ಹಿಂದೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನೀಡುತ್ತಿರುವ ವಿದ್ಯಾಸಿರಿ ಶಿಷ್ಯವೇತನಕ್ಕೆ (Vidyasiri Scholarship) ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

Vidyasiri Scholarship 2026 ಅಗತ್ಯ ದಾಖಲೆಗಳು:

  • ಅರ್ಜಿದಾರರ ಆಧಾರ್ ನಂಬರ್ ಹಾಗೂ ಆಧಾರ್ ಕಾರ್ಡ್ ನಲ್ಲಿ ಇರುವಂತೆ ಹೆಸರು
  • ಪೋನ್ ನಂಬರ್
  • ಇ-ಮೇಲ್ ಐಡಿ
  • 10th ನೋಂದಣಿ ಸಂಖ್ಯೆ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆ‌ರ್.ಡಿ ಸಂಖ್ಯೆ
  • ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
  • ವಿದ್ಯಾರ್ಥಿಯು ವಾಸವಿರುವ ಜಿಲ್ಲೆಯ, ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
  • ಕಾಲೇಜು ದಾಖಲಾತಿ/ ನೋಂದಣಿ ಸಂಖ್ಯೆ
  • ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ)
  • ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/02/2026

ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.

ಪ್ರಮುಖ ಲಿಂಕ್ ಗಳು:
Vidyasiri Scholarship 2025-26 Online Application Link: Apply ಮಾಡಿ
ಅಧಿಕೃತ ವೆಬ್ ಸೈಟ್: ssp.postmatric.karnataka.gov.in, bcwd.karnataka.gov.in
E Mail ಐಡಿ: postmatrichelp@karnataka.gov.in
ಇಲಾಖೆಯ ಸಹಾಯ ವಾಣಿ: 8050770005
ದೂರವಾಣಿ ಸಂಖ್ಯೆ: 1902

Labour Card Scholarship 2026

NSP Scholarship 2025-26: ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿವೇತನ, ಅರ್ಜಿ ಆಹ್ವಾನ

Govt Scholarship 2025: 5,000 ರೂ. ದಿಂದ 1 ಲಕ್ಷ ರೂ. ವರೆಗೆ ಪ್ರೋತ್ಸಾಹಧನ

Telegram Group Join Now
WhatsApp Group Join Now

Leave a Comment