ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ ಸುದ್ದಿ: ಶಿಕ್ಷಕರ ಹುದ್ದೆಗಳ ನೇಮಕಾತಿ ಬಗ್ಗೆ ಶಿಕ್ಷಣ ಸಚಿವರ ಮಾಹಿತಿ

Telegram Group Join Now
WhatsApp Group Join Now

ಬೆಳಗಾವಿ: ಸರ್ಕಾರಿ ಶಾಲಾ ಶಿಕ್ಷಕರಾಗುವ ಕನಸು ಕಾಣುತ್ತಿರುವ ರಾಜ್ಯದ ಸಾವಿರಾರು ಅಭ್ಯರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನದಲ್ಲಿ ಮಾತನಾಡಿದ ಅವರು, ಶಿಕ್ಷಕರ ನೇಮಕಾತಿ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ.

ಬರುವ ಶೈಕ್ಷಣಿಕ ವರ್ಷದ ಒಳಗಾಗಿ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 11,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಉತ್ತರಿಸುವಾಗ ಸಚಿವರು ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯ ವಾಸ್ತವ ಚಿತ್ರಣವನ್ನು ಬಿಚ್ಚಿಟ್ಟರು.

ಶಿಕ್ಷಕರ ಕೊರತೆ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎಷ್ಟಿದೆ ಎಂಬುವುದರ ಬಗ್ಗೆಯೂ ಸಚಿವರು ಅಂಕಿ-ಅಂಶ ನೀಡಿದ್ದಾರೆ.

  • ಪ್ರಾಥಮಿಕ ಶಾಲೆಗಳು: ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಇಲ್ಲಿಗೆ 1,78,935 ಹುದ್ದೆಗಳು ಮಂಜೂರಾಗಿವೆ. ಆದರೆ, ಪ್ರಸ್ತುತ 1,33,345 ಶಿಕ್ಷಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಬರೋಬ್ಬರಿ 45,590 ಹುದ್ದೆಗಳು ಖಾಲಿ ಇವೆ.
  • ಪ್ರೌಢ ಶಾಲೆಗಳು: ರಾಜ್ಯದ 5,024 ಸರ್ಕಾರಿ ಪ್ರೌಢಶಾಲೆಗಳಲ್ಲಿ 44,144 ಮಂಜೂರಾದ ಹುದ್ದೆಗಳಿವೆ. ಈ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು, 12,134 ಹುದ್ದೆಗಳು ಖಾಲಿ ಉಳಿದಿವೆ.

ಹೀಗೆ ಒಟ್ಟಾರೆಯಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸುಮಾರು 57,000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.

51,000 ಅತಿಥಿ ಶಿಕ್ಷಕರ ಆಸರೆ: ಕಾಯಂ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುವವರೆಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದೆ.

ಪ್ರಸಕ್ತ 2025-26ನೇ ಸಾಲಿನಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಬರೋಬ್ಬರಿ 51,000 ಅತಿಥಿ ಶಿಕ್ಷಕರನ್ನು (Guest Teachers) ನೇಮಿಸಿಕೊಳ್ಳಲಾಗಿದೆ. ಇದರಲ್ಲಿ 40,000 ಅತಿಥಿ ಶಿಕ್ಷಕರು ಪ್ರಾಥಮಿಕ ಶಾಲೆಗಳಿಗೆ ಹಾಗೂ 11,000 ಅತಿಥಿ ಶಿಕ್ಷಕರು ಪ್ರೌಢಶಾಲೆಗಳಿಗೆ ನಿಯೋಜನೆಗೊಂಡಿದ್ದಾರೆ. ಅಲ್ಲದೆ, ವಿಕಲಚೇತನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ವಿಶೇಷ ಶಿಕ್ಷಕರನ್ನು ಕೂಡ ನೇಮಕ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.

ಒಟ್ಟಿನಲ್ಲಿ, ಮುಂದಿನ ಶೈಕ್ಷಣಿಕ ವರ್ಷದ ವೇಳೆಗೆ 11 ಸಾವಿರ ಕಾಯಂ ಶಿಕ್ಷಕರ ನೇಮಕಾತಿ ನಡೆದರೆ, ಉದ್ಯೋಗಾಕಾಂಕ್ಷಿಗಳಿಗೆ ಮತ್ತು ಸರ್ಕಾರಿ ಶಾಲೆಗಳಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ.

ಬಿಪಿಎಲ್ ರೇಷನ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆ

PDO Result 2025: PDO 1:1 ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

1600 PSI ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ; ಗೃಹ ಸಚಿವ

Telegram Group Join Now
WhatsApp Group Join Now

Leave a Comment