ಮಲೆನಾಡು ಭಾಗದಲ್ಲಿ, ಅದರಲ್ಲೂ ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (MGNREGS) ಯೋಜನೆಯಡಿ ಶಿವಮೊಗ್ಗ ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ಶಿವಮೊಗ್ಗ ಜಿಲ್ಲಾ ಪಂಚಾಯತ್
ಹುದ್ದೆಯ ಹೆಸರು: Accounts Manager
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: ಶಿವಮೊಗ್ಗ ಜಿಲ್ಲೆ
ವಯೋಮಿತಿಗೆ ಸಂಬಂಧಿಸಿದಂತೆ, ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷದೊಳಗಿನ ಯುವಕ-ಯುವತಿಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. (ಸರ್ಕಾರದ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ).
ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಕಾಂ (M.Com) ಅಥವಾ ಫೈನಾನ್ಸ್ ವಿಷಯದಲ್ಲಿ ಎಂಬಿಎ (MBA) ಪದವಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗೆ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ನಲ್ಲಿ (Typing) ಪರಿಣಿತಿ ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಇರಬೇಕು. ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
ಆಸಕ್ತರು ಡಿಸೆಂಬರ್ 17 ರಿಂದಲೇ ಅರ್ಜಿ ಸಲ್ಲಿಕೆ ಆರಂಭಿಸಬಹುದಾಗಿದ್ದು, 2026ರ ಜನವರಿ 1 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ shivamogga.nic.in ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು. ನಂತರ ಅಗತ್ಯ ದಾಖಲೆಗಳಾದ ಅಂಕಪಟ್ಟಿ, ಐಡಿ ಪ್ರೂಫ್, ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಇಟ್ಟುಕೊಂಡು, ಆನ್ಲೈನ್ ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಜನವರಿ 1ರ ಸಂಜೆಯೊಳಗೆ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಮೆ|| ಬಿ.ಕೆ.ಆರ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು. ದೂರವಾಣಿ ಸಂಖ್ಯೆ: 99002 58454 / 96068 56935.
ಪ್ರಮುಖ ಲಿಂಕ್ಗಳು:
ಪ್ರಕಟಣೆ: ಡೌನ್ಲೋಡ್
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ಸೈಟ್: shivamogga.nic.in
ಇತರೆ ಮಾಹಿತಿಗಳನ್ನು ಓದಿ: