BESCOM Power Cut: ಬೆಂಗಳೂರಿನಲ್ಲಿ ವಾರಾಂತ್ಯದಲ್ಲಿ ಕರೆಂಟ್ ಇರುವುದಿಲ್ಲ; ಯಾವ ಯಾವ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ..?

Telegram Group Join Now
WhatsApp Group Join Now

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಾರಾಂತ್ಯದಲ್ಲಿ (Weekend) ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಡಿಸೆಂಬರ್ 27 ಮತ್ತು 28 ರಂದು (ಶನಿವಾರ ಮತ್ತು ಭಾನುವಾರ) ನಗರದ ಪ್ರಮುಖ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಪೀಣ್ಯ ಮತ್ತು ಸೋಲದೇವನಹಳ್ಳಿ ಸಬ್‌ಸ್ಟೇಷನ್‌ಗಳಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ಕಾಮಗಾರಿ ನಡೆಯುತ್ತಿರುವುದರಿಂದ, ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರೆಂಟ್ ಇರುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

BESCOM Power Cut: ವಿದ್ಯುತ್ ವ್ಯತ್ಯಯದ ವೇಳಾಪಟ್ಟಿ ಮತ್ತು ಪ್ರದೇಶಗಳು:

1. ಪೀಣ್ಯ ವಿಭಾಗ (ಶನಿವಾರ ಮಾತ್ರ – ಡಿ.27): ಪೀಣ್ಯ ಸಬ್‌ಸ್ಟೇಷನ್ ವ್ಯಾಪ್ತಿಯಲ್ಲಿ ಡಿಸೆಂಬರ್ 27 ರಂದು (ಶನಿವಾರ) ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ:

  • ವಿದ್ಯುತ್ ವ್ಯತ್ಯಯ ಪ್ರದೇಶಗಳು: ಪೀಣ್ಯ ಗ್ರಾಮ, ಎಸ್‌ಆರ್‌ಎಸ್ ರಸ್ತೆ, ಪೀಣ್ಯ 4ನೇ ಬ್ಲಾಕ್, 2ನೇ ಬ್ಲಾಕ್, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಭೈರವೇಶ್ವರ ನಗರ, ಪೀಣ್ಯ ಕೈಗಾರಿಕಾ ಪ್ರದೇಶ (1ನೇ ಹಂತ, 3ನೇ ಹಂತ, 4ನೇ ಹಂತ), ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ವೈಷ್ಣವಿ ಮಾಲ್, ಕಾವೇರಿ ಮಾಲ್, ಗೃಹಲಕ್ಷ್ಮಿ ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ ಲೇಔಟ್, ನಾರಾಯಣಪುರ, ಎನ್‌.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ಲಗ್ಗೆರೆ ಹಳೆ ಗ್ರಾಮ (ಭಾಗಶಃ), ದಾಸರಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು.

2. ಜಾಲಹಳ್ಳಿ ವಿಭಾಗ (ಶನಿವಾರ ಮತ್ತು ಭಾನುವಾರ – ಡಿ.27 & ಡಿ.28): ಸೋಲದೇವನಹಳ್ಳಿ ಸಬ್‌ಸ್ಟೇಷನ್ ವ್ಯಾಪ್ತಿಯಲ್ಲಿ ಡಿಸೆಂಬರ್ 27 ಮತ್ತು 28 ರಂದು (ಎರಡು ದಿನ) ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಮಧ್ಯಂತರವಾಗಿ ವಿದ್ಯುತ್ ವ್ಯತ್ಯಯವಾಗಲಿದೆ:

  • ವಿದ್ಯುತ್ ವ್ಯತ್ಯಯ ಪ್ರದೇಶಗಳು: ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಕೆಎಂಎಫ್, ಪಶುಸಂಗೋಪನೆ ಇಲಾಖೆ, ಗುಣಿಅಗ್ರಹಾರ, ಸೋಮಶೆಟ್ಟಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ಡ, ಕೆ.ಟಿ.ಪುರ, ಐಐಎಚ್‌ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕುರುಬರಹಳ್ಳಿ, ಪಾಕೇಗೌಡನಪಾಳ್ಯ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಗಮನಿಸಿ: ಸಾರ್ವಜನಿಕರು ಈ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು, ತಮ್ಮ ಎಲೆಕ್ಟ್ರಾನಿಕ್ ಉಪಕರಣಗಳ ಚಾರ್ಜಿಂಗ್ ಮತ್ತು ನೀರಿನ ವ್ಯವಸ್ಥೆಯನ್ನು ಮೊದಲೇ ಮಾಡಿಕೊಳ್ಳುವುದು ಉತ್ತಮ.

Udyogini Scheme: 1.5 ಲಕ್ಷ ರೂ. ಸಹಾಯಧನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

ಉಚಿತ ಹೊಲಿಗೆ ಯಂತ್ರ ಯೋಜನೆ 2025; ಅರ್ಹರಿಂದ ಆನ್‌ಲೈನ್‌ ಅರ್ಜಿ ಆಹ್ವಾನ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment