Gruhalaxmi DBT Status: ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ 2,000 ರೂ. ಹಣ ನಿಮ್ಮ ಖಾತೆಗೆ ಬಂತಾ..?

Telegram Group Join Now
WhatsApp Group Join Now

ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ 2,000 ರೂ. ಹಣ ನಿಮ್ಮ ಖಾತೆಗೆ ಜಮಾ ಆಗಿದೇಯಾ?

ಹೌದು ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಕಳೆದ ವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣವನ್ನು ಬಿಡುಗಡೆಗೆ ಆರ್ಥಿಕ ಇಲಾಖೆಯು ಒಪ್ಪಿಗೆ ನೀಡಿದೆ, ಡಿಸೆಂಬರ್ 27ರ ಒಳಗಾಗಿ ಅರ್ಹ ಫಲಾನುಭವಿಗಳ ಖಾತೆಗಳಿಗೆ ಹಣ ಜಮಾ ಮಾಡುವುದಾಗಿ ತಿಳಿಸಿದ್ದರು.

ಹಾಗಾಗಿ ನಿಮ್ಮ ಬ್ಯಾಂಕ್‌ ಖಾತೆಗಳಿಗೂ ಯೋಜನೆಯ 2,000 ರೂ. ಜಮಾ ಆಗಿದೇಯಾ ಎಂಬುದನ್ನು ಚೆಕ್‌ ಮಾಡಿಕೊಳ್ಳಬಹುದು. ನಿಮಗೆ ಜಮಾ ಆಗಿರುವ ಬಗ್ಗೆ ಬ್ಯಾಂಕ್‌ನಿಂದ SMS ಬಂದಿರಬಹುದು ಅಥವಾ ನೀವೇ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ನೋಡಿ ತಿಳಿಯಬಹುದು.

ಜಮಾ ಆಗದೇ ಇದ್ದಲ್ಲಿ ಮತ್ತೊಂದಿಷ್ಟು ದಿನ ಕಾಯಬೇಕಾಗುತ್ತದೆ. ಹೊಸ ವರ್ಷದ ಸಂದರ್ಭದಲ್ಲಾದರೂ ಹಣ ಜಮಾ ಆದರೇ ಖುಷಿಯ ಸಂಗತಿ.

ಈ ಯೋಜನೆಯ ಮೂಲಕ ತಿಂಗಳಿಗೆ 2,000 ರೂ. ಅಂತೆ ಅರ್ಹ ಮನೆ ಯಜಮಾನಿ ಮಹಿಳೆಯರಿಗೆ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡುವ ಯೋಜನೆ ದೇಶದಲ್ಲೇಡೆ ಮಾದರಿಯಾಗಿದೆ.

ಬೇರೆ ಬೇರೆ ರಾಜ್ಯಗಳಲ್ಲಿ ಗೃಹಲಕ್ಷ್ಮೀ ಯೋಜನೆಯ ಮಾದರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಚುನಾವಣೆ ಸಂದರ್ಭದಲ್ಲಿ ಯೋಜನೆಯನ್ನು ಘೋಷನೆ ಮಾಡಿ, ಭರ್ಜರಿ ಗೆಲುವನ್ನು ಸಾಧಿಸಿವೆ.

ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 24 ನೇ ಕಂತಿನ ಹಣ ಜಮಾ ಆಗಿದೆಯಾ ಎಂಬುದನ್ನು DBT Status ಚೆಕ್ ಮೂಲಕ ನೋಡಿಕೊಳ್ಳಬಹುದು.

Cibil Score New Rules: ಸಿಬಿಲ್ ಸ್ಕೋರ್ ಇಲ್ಲವೆಂದು ಸಾಲ ಸಿಗುತ್ತಿಲ್ಲವೇ? ಚಿಂತೆ ಬಿಡಿ

Udyogini Scheme: 1.5 ಲಕ್ಷ ರೂ. ಸಹಾಯಧನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment