ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕಾತಿ 2026; ಪರಿಷ್ಕೃತ ಅಧಿಸೂಚನೆ ಪ್ರಕಟ | Ballari DCC Bank Recruitment 2026 Apply Online @bellarydcc.bank.in

Telegram Group Join Now
WhatsApp Group Join Now

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (Ballari DCC Bank Recruitment 2026) ನಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 82 ಹುದ್ದೆಗಳ ನೇರ ನೇಮಕಾತಿಗಾಗಿ ಪರಿಷ್ಕೃತ ಅಧಿಸೂಚನೆಯನ್ನು ಪ್ರಕಟಿಸಿದೆ.

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ನಿಗದಿಪಡಿಸಿರುವ ದಿನಾಂಕದ ಒಳಗಾಗಿ ಅಂದರೆ ಜೂನ್ 30, 2026ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿಂದೆ ದಿನಾಂಕ 06-04-2026 ರಂದು ಪ್ರಕಟಗೊಂಡಿದ್ದ ಅಧಿಸೂಚನೆಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ್ದ ಅಭ್ಯರ್ಥಿಗಳು ಈಗ ಹೊಸದಾಗಿ ಮರು-ಅರ್ಜಿ (Application Re-submit) ಸಲ್ಲಿಸುವುದು ಕಡ್ಡಾಯವಾಗಿದೆ.

ಆದರೆ ಅವರು ಮತ್ತೊಮ್ಮೆ ಶುಲ್ಕ ಪಾವತಿಸುವ ಅಗತ್ಯವಿರುವುದಿಲ್ಲ. ಈಗಾಗಲೇ ಅರ್ಜಿ ಸಲ್ಲಿಸಿರುವ ಪ್ರತಿಯೊಂದು ಹುದ್ದೆಗೂ ಮರು ಅರ್ಜಿಯನ್ನು ಸಲ್ಲಿಸತಕ್ಕದ್ದು, ಒಂದು ವೇಳೆ ಮರು ಅರ್ಜಿ ಸಲ್ಲಿಕೆ ಮಾಡದಿದ್ದಲ್ಲಿ ಅಂತಹವರ ಅರ್ಜಿಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಹಾಗೂ ಪಾವತಿಸಿರುವ ಶುಲ್ಕವನ್ನು ಹಿಂದಿರುಗಿಸುವುದಿಲ್ಲ.

ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿಸ್ತೃತವಾಗಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ತಪ್ಪುಗಳಿಲ್ಲದಂತೆ ಎಚ್ಚರಿಕೆಯಿಂದ ಆನ್‌ಲೈನ್ ಅರ್ಜಿ ಸಲ್ಲಿಸಿ.

ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಹೊಸಪೇಟೆ (BDCC Bank)
  • ವೇತನ ಶ್ರೇಣಿ: 29,600 ರೂ. ನಿಂದ 83,700 ರೂ.
  • ಹುದ್ದೆಗಳ ಸಂಖ್ಯೆ: 82 ಹುದ್ದೆಗಳು
  • ಉದ್ಯೋಗ ಸ್ಥಳ: ಬಳ್ಳಾರಿ / ಹೊಸಪೇಟೆ

ಹುದ್ದೆಗಳ ವಿವರ, ವೇತನ ಶ್ರೇಣಿ ಹಾಗೂ ಶೈಕ್ಷಣಿಕ ಅರ್ಹತೆ:

ವ್ಯವಸ್ಥಾಪಕರು / ಪ್ರಥಮ ದರ್ಜೆ ಸಹಾಯಕರು:
ಹುದ್ದೆಗಳು: 22
ವೇತನ: 44,425 – 83,700 ರೂ.
ಶೈಕ್ಷಣಿಕ ಅರ್ಹತೆ: ಭಾರತದ ಕಾನೂನಿನನ್ವಯ ಸ್ಥಾಪನೆಯಾದ ವಿಶ್ವವಿದ್ಯಾಲಯದ ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಕಂಪ್ಯೂಟರ್ ನಿರ್ವಹಣೆ ಬಗ್ಗೆ ಜ್ಞಾನ ಹೊಂದಿರತಕ್ಕದ್ದು.

ದ್ವಿತೀಯ ದರ್ಜೆ ಸಹಾಯಕರು:
ಹುದ್ದೆಗಳು: 28
ವೇತನ: 34,100 – 67,600 ರೂ.
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಪದವಿ ಪೂರ್ವ ವಿದ್ಯಾಲಯದಿಂದ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕಂಪ್ಯೂಟರ್ ನಿರ್ವಹಣೆ ಬಗ್ಗೆ ಜ್ಞಾನ ಹೊಂದಿರತಕ್ಕದ್ದು.

ವಾಹನ ಚಾಲಕರು:
ಹುದ್ದೆಗಳು: 1
ವೇತನ: 31,775 – 61,300 ರೂ.
ಶೈಕ್ಷಣಿಕ ಅರ್ಹತೆ: ಎಸ್‌ಎಸ್‌ಎಲ್‌ಸಿ (SSLC) ಯಲ್ಲಿ ಉತ್ತೀರ್ಣರಾಗಿದ್ದು, ಕಾನೂನುಬದ್ಧ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.

ಕಿರಿಯ ಸೇವಕರು:
ಹುದ್ದೆಗಳು: 31
ವೇತನ: 29,600 – 52,800 ರೂ.
ಶೈಕ್ಷಣಿಕ ಅರ್ಹತೆ: ಎಸ್‌ಎಸ್‌ಎಲ್‌ಸಿ (SSLC) ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ಗಮನಿಸಿ: ಎಲ್ಲಾ ಹುದ್ದೆಗಳಿಗೂ ಕನ್ನಡ ಭಾಷೆಯನ್ನು ಓದುವ ಸಾಮರ್ಥ್ಯದ ಜೊತೆ ಕನ್ನಡದ ಜ್ಞಾನ, ಬರೆಯುವಿಕೆ, ಸ್ವಚ್ಛವಾಗಿ ಮಾತನಾಡುವ ಮತ್ತು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಕಡ್ಡಾಯವಾಗಿರುತ್ತದೆ.

ವಯೋಮಿತಿ ಹಾಗೂ ವಯೋಮಿತಿ ಸಡಿಲಿಕೆ: ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಸರ್ಕಾರದ ಅಧಿಸೂಚನೆ ಆದೇಶದನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (One Time Measure) 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ.

ಇದರನ್ವಯ ಸಾಮಾನ್ಯ ಅಭ್ಯರ್ಥಿಗಳಿಗೆ 40 ವರ್ಷಗಳು (35+5), OBC ಅಭ್ಯರ್ಥಿಗಳಿಗೆ (2ಎ, 2ಬಿ, 3ಎ, 3ಬಿ) 43 ವರ್ಷಗಳು (38+5), ಹಾಗೂ SC/ST ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 45 ವರ್ಷಗಳ (40+5) ಗರಿಷ್ಠ ವಯೋಮಿತಿ ನಿಗದಿಯಾಗಿದೆ. PwBD (ವಿಕಲಚೇತನ) ಹಾಗೂ ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳ ಹೆಚ್ಚುವರಿ ಸಡಿಲಿಕೆ ಇರುತ್ತದೆ.

ಆಯ್ಕೆ ವಿಧಾನ: ಬಾಹ್ಯ ಮೂಲ ಸಂಸ್ಥೆಯಿಂದ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ವ್ಯವಸ್ಥಾಪಕರು ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ 200 ಅಂಕಗಳ ಲಿಖಿತ ಪರೀಕ್ಷೆ ಇರುತ್ತದೆ (ಕನ್ನಡ-50, ಇಂಗ್ಲೀಷ್-25, ಸಾಮಾನ್ಯ ಜ್ಞಾನ-25, ಸಹಕಾರ ವಿಷಯ-50, ಸಂವಿಧಾನ-25, ಬ್ಯಾಂಕಿಂಗ್-25 ಅಂಕಗಳು).

ವಾಹನ ಚಾಲಕ ಹಾಗೂ ಕಿರಿಯ ಸೇವಕ ಹುದ್ದೆಗಳಿಗೆ 100 ಅಂಕಗಳ ಲಿಖಿತ ಪರೀಕ್ಷೆ ಇರುತ್ತದೆ (ಕನ್ನಡ-50, ಸಾಮಾನ್ಯ ಜ್ಞಾನ-50). ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಶೇಕಡ 85 ಕ್ಕಿಳಿಸಿ, ಪ್ರಾಪ್ತವಾಗುವ ಅಂಕಗಳ ಶೇಕಡಾವಾರು ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5 ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ಸಂದರ್ಶನಕ್ಕೆ 15 ಅಂಕಗಳು ನಿಗದಿಪಡಿಸಿದ್ದು, ಎರಡೂ ಅಂಕಗಳನ್ನು ಸೇರಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು.

ಅರ್ಜಿ ಶುಲ್ಕ ಹಾಗೂ ಪಾವತಿಸುವ ವಿಧಾನ: ಸಾಮಾನ್ಯ ಮತ್ತು ಇತರೆ ಪ್ರವರ್ಗ (2ಎ, 2ಬಿ, 3ಎ, 3ಬಿ) ಅಭ್ಯರ್ಥಿಗಳಿಗೆ 1,000 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500 ರೂ. ಶುಲ್ಕ ನಿಗದಿಪಡಿಸಲಾಗಿದೆ (ಗೇಟ್ ವೇ ಶುಲ್ಕ ಪ್ರತ್ಯೇಕ).

ಅರ್ಜಿ ಶುಲ್ಕವನ್ನು Net Banking, Credit Card, Debit Card, UPI ಅಥವಾ Google Pay ಮುಖಾಂತರ ಆನ್‌ಲೈನ್‌ನಲ್ಲಿ ಮಾತ್ರ ಪಾವತಿಸಬೇಕು. ಡಿ.ಡಿ. / ಪೋಸ್ಟಲ್ ಆರ್ಡರ್ / ಮನಿ ಆರ್ಡರ್ ಸ್ವೀಕರಿಸಲಾಗುವುದಿಲ್ಲ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-06-2026
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2026 (ರಾತ್ರಿ 11.59 ರೊಳಗಾಗಿ)

Ballari DCC Bank Recruitment 2026 Link ಮತ್ತು ಪ್ರಮುಖ ಲಿಂಕ್’ಗಳು:

KMF GUMUL Recruitment 2026

ವಿದ್ಯಾರ್ಥಿಗಳಿಗೆ ₹35 ಸಾವಿರ ಪ್ರೋತ್ಸಾಹಧನ; ಆನ್‌ಲೈನ್‌ ಅರ್ಜಿ ಆಹ್ವಾನ

SSLC ಪಾಸಾದ ವಿದ್ಯಾರ್ಥಿಗಳಿಗೆ 15,000 ರೂ. ಪ್ರೋತ್ಸಾಹಧನ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment