RDPR Recruitment 2026: FDA ಮತ್ತು ಇತರೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Telegram Group Join Now
WhatsApp Group Join Now

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವ್ಯವಸ್ಥಾಪಕ, ಪ್ರಥಮ ದರ್ಜೆ ಸಹಾಯಕ ಹಾಗೂ ಲೆಕ್ಕ ಸಹಾಯಕ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ (RDPR Recruitment 2026) ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 4 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಜೂನ್ 30, 2026 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿ, ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ ಹಾಗೂ ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR)
  • ಒಟ್ಟು ಹುದ್ದೆಗಳ ಸಂಖ್ಯೆ: 04
  • ವೇತನ: 22,000 ರೂ. ರಿಂದ 28,000 ರೂ.
  • ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಗಳ ವಿವರ:

ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ವ್ಯವಸ್ಥಾಪಕ (Manager)01
ಪ್ರಥಮ ದರ್ಜೆ ಸಹಾಯಕ (FDA)01
ಲೆಕ್ಕ ಸಹಾಯಕರು (Accounts Assistant)02
ಒಟ್ಟು ಹುದ್ದೆಗಳು04

ಶೈಕ್ಷಣಿಕ ಅರ್ಹತೆ:
RDPR ಕರ್ನಾಟಕದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಭಾರತದ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪದವಿ (Degree) ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:

  • ವ್ಯವಸ್ಥಾಪಕ ಹುದ್ದೆಗೆ: ಮಾಸಿಕ ರೂ. 28,000/-
  • ಪ್ರಥಮ ದರ್ಜೆ ಸಹಾಯಕ ಹಾಗೂ ಲೆಕ್ಕ ಸಹಾಯಕ ಹುದ್ದೆಗೆ: ಮಾಸಿಕ ರೂ. 22,000/-

ವಯೋಮಿತಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ವ್ಯವಸ್ಥಾಪಕ, ಪ್ರಥಮ ದರ್ಜೆ ಸಹಾಯಕ ಹಾಗೂ ಲೆಕ್ಕ ಸಹಾಯಕ ಸೇರಿ ಎಲ್ಲಾ ಹುದ್ದೆಗಳಿಗೂ ಗರಿಷ್ಠ ವಯೋಮಿತಿಯನ್ನು 62 ವರ್ಷಗಳಿಗೆ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ: ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ (Interview) ಮೂಲಕ ಆಯ್ಕೆ ಮಾಡಲಾಗುವುದು. ಇದರಲ್ಲಿ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:
ಮೊದಲನೆಯದಾಗಿ RDPR ಕರ್ನಾಟಕ ನೇಮಕಾತಿ ಅಧಿಸೂಚನೆ 2026 ಅನ್ನು ಸಂಪೂರ್ಣವಾಗಿ ಓದಿ, ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ. ಅರ್ಜಿಗಳನ್ನು ಆಫ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕಾಗಿರುವುದರಿಂದ, ಕೆಳಗೆ ನೀಡಲಾಗಿರುವ ಲಿಂಕ್ ಬಳಸಿ ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ನಮೂನೆಯನ್ನು (Application Form) ಡೌನ್‌ಲೋಡ್ ಮಾಡಿಕೊಳ್ಳಿ.

ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ. ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಮ್ಮ ಇತ್ತೀಚಿನ ಫೋಟೋ, ಐಡಿ ಪ್ರೂಫ್, ವಯಸ್ಸು ಹಾಗೂ ಶೈಕ್ಷಣಿಕ ಅರ್ಹತೆಯ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ. ಅಂತಿಮವಾಗಿ ಈ ಎಲ್ಲಾ ದಾಖಲೆಗಳನ್ನು ಒಳಗೊಂಡ ಲಕೋಟೆಯನ್ನು ಕೊನೆಯ ದಿನಾಂಕದ ಮೊದಲು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಕಳುಹಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ನಿರ್ದೇಶಕರು, ಸಾಮಾಜಿಕ ಸಂಶೋಧನಾ ನಿರ್ದೇಶನಾಲಯ,
ಮೊದಲ ಮಹಡಿ, ಅಭಯ ಸಂಕೀರ್ಣ,
ಕೊಳಗೇರಿ ಅಭಿವೃದ್ಧಿ ಮಂಡಳಿ ಕಟ್ಟಡ, ನಂ.55,
ರಿಸಲ್ದಾರ್ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು- 560020.

RDPR Recruitment 2026 ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-06-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2026

ಪ್ರಮುಖ ಲಿಂಕ್‌ಗಳು:

  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಡೌನ್’ಲೋಡ್
  • ಅಧಿಕೃತ ವೆಬ್‌ಸೈಟ್: rdpr.karnataka.gov.in

KMF SHIMUL ವಿವಿಧ ಹುದ್ದೆಗಳ ನೇಮಕಾತಿ 2026

KSP Civil Police Constable Recruitment 2026

ಕೃಷಿ ಇಲಾಖೆ ನೇಮಕಾತಿ 2026

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕಾತಿ 2026

KMF GUMUL Recruitment 2026

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment