PUC ಪಾಸಾದವರಿಗೆ ಗುಡ್ ನ್ಯೂಸ್: ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ | Tumkur District Court Recruitment 2026 Apply Online For Stenographer Gr-III & Typist

Telegram Group Join Now
WhatsApp Group Join Now

ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ-ಗ್ರೇಡ್-III ಹಾಗೂ ಬೆರಳಚ್ಚುಗಾರ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಜುಲೈ 25, 2026 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಪಾಸಾಗಿರುವ ಅಭ್ಯರ್ಥಿಗಳಿಗೆ ನ್ಯಾಯಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಇದು ಉತ್ತಮ ಅವಕಾಶವಾಗಿದೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರ ವೇತನವನ್ನು ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕವಾದ ಆಗಸ್ಟ್ 24, 2026 ರ ರಾತ್ರಿ 11:59 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Tumkur District Court Recruitment 2026 ಸಂಕ್ಷಿಪ್ತ ವಿವರ:

  • ನೇಮಕಾತಿ ಸಂಸ್ಥೆ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ತುಮಕೂರು
  • ಹುದ್ದೆಗಳ ಹೆಸರು: ಶೀಘ್ರಲಿಪಿಗಾರ-ಗ್ರೇಡ್-3 ಮತ್ತು ಬೆರಳಚ್ಚುಗಾರ (Typist)
  • ಒಟ್ಟು ಹುದ್ದೆಗಳ ಸಂಖ್ಯೆ: 24 ಹುದ್ದೆಗಳು
  • ಉದ್ಯೋಗ ಸ್ಥಳ: ತುಮಕೂರು
  • ವೇತನ: ರೂ. 34,100 ದಿಂದ ರೂ. 83,700/- ರವರೆಗೆ

ಹುದ್ದೆಗಳ ವಿವರ:

ತುಮಕೂರು ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಒಟ್ಟು 24 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅಧಿಸೂಚನೆವಾರು ಹುದ್ದೆಗಳ ವಿವರ ಈ ಕೆಳಗಿನಂತಿದೆ:

  • ಶೀಘ್ರಲಿಪಿಗಾರ-ಗ್ರೇಡ್-3 (Stenographer Gr-III): 10 ಹುದ್ದೆಗಳು (ಹೊಸ ಹುದ್ದೆಗಳು 7 + ಬ್ಯಾಕ್‌ಲಾಗ್ ಹುದ್ದೆಗಳು 3).
  • ಬೆರಳಚ್ಚುಗಾರ (Typist): 14 ಹುದ್ದೆಗಳು (ಹೊಸ ಹುದ್ದೆಗಳು 13 + ಬ್ಯಾಕ್‌ಲಾಗ್ ಹುದ್ದೆ 1).

ಶೈಕ್ಷಣಿಕ ಅರ್ಹತೆ:

ವಿವಿಧ ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ವಿವರಗಳು ಹೀಗಿವೆ:

  • ಶೀಘ್ರಲಿಪಿಗಾರ-ಗ್ರೇಡ್-3: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ 3 ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ, ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಹಿರಿಯ ಶ್ರೇಣಿ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಬೆರಳಚ್ಚುಗಾರ (Typist): ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ 3 ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ, ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವೇತನ ವಿವರ:

  • ಶೀಘ್ರಲಿಪಿಗಾರ-ಗ್ರೇಡ್-3: ರೂ. 44,425 – ರೂ. 83,700/-
  • ಬೆರಳಚ್ಚುಗಾರ (Typist): ರೂ. 34,100 – ರೂ. 67,600/-

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಗಿನ ವಯೋಮಿತಿಯನ್ನು ಹೊಂದಿರಬೇಕು:

  • ಕನಿಷ್ಠ ವಯಸ್ಸು: 18 ವರ್ಷಗಳು

ವಯೋಮಿತಿ ಸಡಿಲಿಕೆ:

ಸರ್ಕಾರದ ನಿಯಮಗಳ ಪ್ರಕಾರ, ವಿವಿಧ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ 5 ವರ್ಷಗಳ ಸಡಿಲಿಕೆಯನ್ನು ಸೇರಿಸಿ ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 40 ವರ್ಷಗಳು (35+5)
  • ಪ್ರವರ್ಗ-2A, 2B, 3A, 3B ಅಭ್ಯರ್ಥಿಗಳಿಗೆ: 43 ವರ್ಷಗಳು (38+5)
  • SC / ST ಮತ್ತು ಪ್ರವರ್ಗ-I ಅಭ್ಯರ್ಥಿಗಳಿಗೆ: 45 ವರ್ಷಗಳು (40+5)
  • ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ: ಕರ್ನಾಟಕ ಸಿವಿಲ್ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಅರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) Collect ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಪಾವತಿಸಬೇಕು:

  • ಸಾಮಾನ್ಯ, ಪ್ರವರ್ಗ-2A, 2B, 3A, 3B ಅಭ್ಯರ್ಥಿಗಳಿಗೆ: ರೂ. 200/-
  • SC/ST, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 25-07-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-08-2026 (ರಾತ್ರಿ 11:59 ಗಂಟೆಯವರೆಗೆ)

ಪ್ರಮುಖ ಲಿಂಕ್‌ಗಳು:

  • ಅಧಿಕೃತ ಅಧಿಸೂಚನೆ: ಡೌನ್‌ಲೋಡ್
  • ಶೀಘ್ರಲಿಪಿಗಾರ-ಗ್ರೇಡ್-3 ಆನ್‌ಲೈನ್ ಅರ್ಜಿ ಲಿಂಕ್: Apply ಮಾಡಿ
  • ಬೆರಳಚ್ಚುಗಾರ ಆನ್‌ಲೈನ್ ಅರ್ಜಿ ಲಿಂಕ್: Apply ಮಾಡಿ
  • ಅಧಿಕೃತ ವೆಬ್‌ಸೈಟ್: tumakuru.dcourts.gov.in

HDFC ಬ್ಯಾಂಕ್ ವಿದ್ಯಾರ್ಥಿವೇತನ 2026

KEA ಹೊಸ ನೇಮಕಾತಿ ಅಧಿಸೂಚನೆ ಪ್ರಕಟ; ಆನ್‌ಲೈನ್‌ ಅರ್ಜಿ ಆಹ್ವಾನ 

ತೋಟಗಾರಿಕೆ ಇಲಾಖೆ ನೇಮಕಾತಿ 2026; ಅರ್ಜಿ ಆಹ್ವಾನ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment