KEA VAO Exam Key Answer 2026: ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟ

Telegram Group Join Now
WhatsApp Group Join Now

ಉಳಿಕೆ ಮೂಲ ವೃಂದದ (RPC) ‘ಗ್ರಾಮ ಆಡಳಿತ ಅಧಿಕಾರಿ’ (VAO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ಟೋಬರ್ 04, 2026 ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (VAO Exam Key Answer 2026) ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳ ಮಾಹಿತಿಗಾಗಿ ಪತ್ರಿಕೆ-1 (ಸಾಮಾನ್ಯ ಜ್ಞಾನ) ಮತ್ತು ಪತ್ರಿಕೆ-2 (ಕನ್ನಡ, ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನ) ರ ಕೀ ಉತ್ತರಗಳನ್ನು ಇಂದು (ಅಕ್ಟೋಬರ್ 06, 2026) ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಕೀ ಉತ್ತರಗಳಿಗೆ ಆಕ್ಷೇಪಣೆ (Objections) ಸಲ್ಲಿಸುವ ವಿಧಾನ:

ಪ್ರಾಧಿಕಾರ ಪ್ರಕಟಿಸಿರುವ ತಾತ್ಕಾಲಿಕ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಆನ್‌ಲೈನ್ ಮೂಲಕ ದೂರು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

  • ಆಕ್ಷೇಪಣೆ ಸಲ್ಲಿಸಲು ವೆಬ್‌ಸೈಟ್ ಲಿಂಕ್: ಅಭ್ಯರ್ಥಿಗಳು KEA ಅಧಿಕೃತ ವೆಬ್‌ಸೈಟ್ ಮೂಲಕ ಆಕ್ಷೇಪಣೆ ಸಲ್ಲಿಸಬಹುದು.
  • ಕೊನೆಯ ದಿನಾಂಕ: ದಿನಾಂಕ: 08-10-2026 ರ ಬೆಳಿಗ್ಗೆ 10:30 ಗಂಟೆಯೊಳಗೆ ಆಕ್ಷೇಪಣೆಗಳನ್ನು ಸಲ್ಲಿಸತಕ್ಕದ್ದು.
  • ಆಕ್ಷೇಪಣಾ ಶುಲ್ಕ: ಅಭ್ಯರ್ಥಿಗಳು ತಾವು ಸಲ್ಲಿಸುವ ಪ್ರತಿ ಆಕ್ಷೇಪಣೆಗೆ ರೂ. 25/- ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು. (ಈ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ).

ಆಕ್ಷೇಪಣೆ ಸಲ್ಲಿಸುವಾಗ ಗಮನಿಸಬೇಕಾದ ಪ್ರಮುಖ ನಿಯಮಗಳು:

  • ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಪತ್ರಿಕೆಯ ವಿವರ (Paper 1 / Paper 2), ಪರೀಕ್ಷಾ ದಿನಾಂಕ, ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ (Version Code), ಹಾಗೂ ಪ್ರಶ್ನೆ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು.
  • ಆಕ್ಷೇಪಣೆಯನ್ನು ದೃಢೀಕರಿಸಲು ಸೂಕ್ತವಾದ ‘ಪೂರಕ ದಾಖಲೆಗಳನ್ನು’ (Supporting documents) ಕಡ್ಡಾಯವಾಗಿ PDF ರೂಪದಲ್ಲಿ ಮಾತ್ರ ಅಪ್‌ಲೋಡ್ ಮಾಡಬೇಕು.
  • ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ನಮೂದಿಸದೇ ಇರುವ, ಆಧಾರರಹಿತವಾಗಿರುವ / ಅಪೂರ್ಣವಾಗಿರುವ ಹಾಗೂ ನಿಗದಿತ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪ್ರಾಧಿಕಾರವು ಪರಿಗಣಿಸುವುದಿಲ್ಲ.
  • ಬಂದಿರುವ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯು (Expert Committee) ಕೂಲಂಕಷವಾಗಿ ಪರಿಶೀಲಿಸಿದ ನಂತರ ಅವರು ತೀರ್ಮಾನಿಸುವ ಕೀ ಉತ್ತರಗಳೇ ಅಂತಿಮವಾಗಿರುತ್ತವೆ (Final Key Answers).

ಅಭ್ಯರ್ಥಿಗಳು ತಕ್ಷಣವೇ ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್‌ಗೆ (A1 ದಿಂದ D3 ವರೆಗೆ) ಅನುಗುಣವಾಗಿ ಕೀ ಉತ್ತರಗಳನ್ನು ಪರಿಶೀಲಿಸಿಕೊಳ್ಳಲು ಸೂಚಿಸಲಾಗಿದೆ.

VAO Exam Key Answer 2026 ಪ್ರಮುಖ ಲಿಂಕ್‌ಗಳು:

KEA VAO Exam Key Answer 2026 PDF: Download
KEA Official Website: cetonline.karnataka.gov.in/kea

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment