ಬಿಸಿಎಂ ಮೆಟ್ರಿಕ್ ಪೂರ್ವ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | BCM Pre-Matric Hostel Admission 2026 Online Application

Telegram Group Join Now
WhatsApp Group Join Now

ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCWD) 2026-27 ನೇ ಶೈಕ್ಷಣಿಕ ಸಾಲಿಗೆ ಮೆಟ್ರಿಕ್ ಪೂರ್ವ (BCM Pre-Matric Hostel) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅಧಿಕೃತ ಪ್ರಕಟಣೆ ಹೊರಡಿಸಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಹಾಸ್ಟೆಲ್‌ಗಳಿಗೆ ಹೊಸದಾಗಿ ಸೇರಬಯಸುವ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು?: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಈ ಉಚಿತ ಹಾಸ್ಟೆಲ್ ಸೌಲಭ್ಯಕ್ಕಾಗಿ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಪೋಷಕರ ವಾರ್ಷಿಕ ಆದಾಯ ಮಿತಿ ಎಷ್ಟು? ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ವರ್ಗಗಳ ಆಧಾರದ ಮೇಲೆ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:

  • ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ: ವಾರ್ಷಿಕ ಆದಾಯ 1 ಲಕ್ಷ ರೂ. ಗಳ ಒಳಗಿರಬೇಕು.
  • ಪ್ರವರ್ಗ-1, ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ವಿದ್ಯಾರ್ಥಿಗಳಿಗೆ: ವಾರ್ಷಿಕ ಆದಾಯ 2.50 ಲಕ್ಷ ರೂ. ಗಳ ಒಳಗಿರಬೇಕು.

BCM Pre-Matric Hostel 2026 ಅಗತ್ಯ ದಾಖಲೆಗಳು:

  1. ವಿದ್ಯಾರ್ಥಿಯ ಆಧಾರ್ ಕಾರ್ಡ್: ಇದು ಅತ್ಯಂತ ಪ್ರಮುಖ ದಾಖಲೆಯಾಗಿದ್ದು, ಆನ್‌ಲೈನ್ ಅರ್ಜಿಗೆ ಕಡ್ಡಾಯವಾಗಿದೆ.
  2. ಜಾತಿ ಮತ್ತು ಆದಾಯ ಪ್ರಮಾಣ ಪತ್ರ: ವಿದ್ಯಾರ್ಥಿ ಅಥವಾ ಪೋಷಕರ ಹೆಸರಿನಲ್ಲಿರುವ ಚಾಲ್ತಿಯಲ್ಲಿರುವ ಪ್ರಮಾಣ ಪತ್ರ. (ಅರ್ಜಿ ಸಲ್ಲಿಸುವಾಗ ಇದರ RD ನಂಬರ್ (RD Number) ನಮೂದಿಸಬೇಕು).
  3. SATS ನಂಬರ್ (Student Tracking System Number): ವಿದ್ಯಾರ್ಥಿಯು ಶಾಲೆಯಲ್ಲಿ ಓದುತ್ತಿರುವ ಬಗೆಗಿನ ರಾಜ್ಯ ಸರ್ಕಾರದ ಶಾಲಾ ದಾಖಲಾತಿ ಸಂಖ್ಯೆ (ಇದನ್ನು ಶಾಲೆಯಲ್ಲಿ ಕೇಳಿ ಪಡೆಯಬಹುದು).
  4. ಹಿಂದಿನ ವರ್ಷದ ಅಂಕಪಟ್ಟಿ: ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ತೇರ್ಗಡೆಯಾಗಿರುವ ಅಂಕಪಟ್ಟಿ ಅಥವಾ ಶಾಲಾ ವ್ಯಾಸಂಗ ಪ್ರಮಾಣ ಪತ್ರ (Study Certificate).
  5. ಶಾಲಾ ಪ್ರವೇಶಾತಿ ರಶೀದಿ: ಪ್ರಸಕ್ತ (2026-27) ಶೈಕ್ಷಣಿಕ ಸಾಲಿಗೆ ಶಾಲೆಗೆ ದಾಖಲಾಗಿರುವ ಅಥವಾ ಶುಲ್ಕ ಪಾವತಿಸಿದ ರಶೀದಿ.
  6. ಬ್ಯಾಂಕ್ ಪಾಸ್‌ಬುಕ್: ವಿದ್ಯಾರ್ಥಿಯ ಹೆಸರಿನಲ್ಲಿರುವ ಹಾಗೂ ಆಧಾರ್‌ಗೆ ಲಿಂಕ್ ಆಗಿರುವ (NPCI ಮ್ಯಾಪ್ ಆಗಿರುವ) ಬ್ಯಾಂಕ್ ಖಾತೆಯ ಮುಖಪುಟದ ಪ್ರತಿ.
  7. Passport Size ಭಾವಚಿತ್ರ: ವಿದ್ಯಾರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ.
  8. ವಾಸಸ್ಥಳ ದೃಢೀಕರಣ ಪತ್ರ: (ಅಗತ್ಯವಿದ್ದರೆ ಮಾತ್ರ).

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ಇಲಾಖೆಯ ಅಧಿಕೃತ ಪೋರ್ಟಲ್ https://shp.karnataka.gov.in/bcwd ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

  • ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-06-2026.

BCM Pre-Matric Hostel 2026-27 Application ಪ್ರಮುಖ ಲಿಂಕ್‌ಗಳು:

  • ಆನ್‌ಲೈನ್ ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
  • ಇಲಾಖೆಯ ಅಧಿಕೃತ ವೆಬ್‌ಸೈಟ್: https://bcwd.karnataka.gov.in/

ಹೆಚ್ಚಿನ ಮಾಹಿತಿಗಾಗಿ: ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ಪಟ್ಟಿ, ಪ್ರವೇಶಕ್ಕೆ ಇರಬೇಕಾದ ಇತರೆ ನಿಖರ ಅರ್ಹತೆಗಳು ಹಾಗೂ ಸಲ್ಲಿಸಬೇಕಾದ ಅಗತ್ಯ ದಾಖಲೆಗಳ ವಿವರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ ನಲ್ಲಿ ವೀಕ್ಷಿಸಬಹುದು.

ಸಹಾಯವಾಣಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಇಲಾಖೆಯ ಇ-ಮೇಲ್ bcwdhelpline@gmail.com ಗೆ ಮೇಲ್ ಮಾಡಬಹುದು ಅಥವಾ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಬಹುದು. ಜೊತೆಗೆ, ಅಗತ್ಯ ದಾಖಲೆಗಳೊಂದಿಗೆ ತಮ್ಮ ಸಮೀಪದ ಜಿಲ್ಲಾ ಅಥವಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಚೇರಿ ಅಧಿಕಾರಿಗಳನ್ನು ಖುದ್ದಾಗಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ವಿದ್ಯಾರ್ಥಿಗಳಿಗೆ ₹35 ಸಾವಿರ ಪ್ರೋತ್ಸಾಹಧನ; ಆನ್‌ಲೈನ್‌ ಅರ್ಜಿ ಆಹ್ವಾನ

SSLC Prize Money 2026: SSLC ಪಾಸಾದ ವಿದ್ಯಾರ್ಥಿಗಳಿಗೆ 15,000 ರೂ. ಪ್ರೋತ್ಸಾಹಧನ

SC ST ಮೆಟ್ರಿಕ್-ಪೂರ್ವ ಉಚಿತ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ

SC ST ಮೆಟ್ರಿಕ್ ನಂತರದ ಉಚಿತ ಹಾಸ್ಟೆಲ್ ಅರ್ಜಿ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment