Anganwadi Recruitment 2025: ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನ

Telegram Group Join Now
WhatsApp Group Join Now

ಶಿವಮೊಗ್ಗ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಶಿಶು ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಕೆ ಲಿಂಕ್‌ ಮತ್ತು ಇತ್ಯಾದಿ ಮಾಹಿತಿಗಳನ್ನು ಈ ಕೇಳಗೆ ನೀಡಲಾಗಿದೆ. ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD ಶಿವಮೊಗ್ಗ)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 544
ಉದ್ಯೋಗ ಸ್ಥಳ: ಶಿವಮೊಗ್ಗ

ಹುದ್ದೆಗಳ ವಿವರ:

ತಾಲೂಕುಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಸಂಖ್ಯೆಅಂಗನವಾಡಿ ಸಹಾಯಕಿ ಹುದ್ದೆಗಳ ಸಂಖ್ಯೆ
ಸಾಗರ 362
ಭದ್ರಾವತಿ 1959
ಹೊಸ ನಗರ6137
ಶಿಕಾರಿಪುರ 123
ಶಿವಮೊಗ್ಗ 1693
ಸೊರಬಾ 342
ತೀರ್ಥಹಳ್ಳಿ 1169

ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ 12 ನೇ ತರಗತಿ ಉತ್ತೀರ್ಣರಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ 10th ಪಾಸಾಗಿರಬೇಕು‌. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ/ಮಾರ್ಗಸೂಚಿಗಳನ್ನು ಓದಿ.

ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾರ್ಗಸೂಚಿಗಳ ಪ್ರಕಾರ ವೇತನವನ್ನು ನೀಡುತ್ತಾರೆ.

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು. ಮತ್ತು ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಇರುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ: 15-11-2025
ಅರ್ಜಿ ಸಲ್ಲಿಸಲು ಕೊನೆಯ ದಿನ: 15-12-2025

ಪ್ರಮುಖ ಲಿಂಕ್’ಗಳು:
ಮಾರ್ಗಸೂಚಿಗಳು: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnemakaone.kar.nic.in

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2025

IPPB Recruitment 2025: ಭಾರತೀಯ ಅಂಚೆ ಬ್ಯಾಂಕ್ ನೇಮಕಾತಿ 2025

Telegram Group Join Now
WhatsApp Group Join Now

Leave a Comment