ಎಲ್ಲರಿಗೂ ನಮಸ್ಕಾರ, ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಯಾವಾಗ ನಿಮ್ಮ ಖಾತೆಗೆ ಸಂದಾಯವಾಗಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಚಿಂತೆ ಬಿಡಿ. ಅನ್ನಭಾಗ್ಯ ಯೋಜನೆಯ DBT ಹಣದ (Anna Bhagya Amount 2025) ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇವೆ ಓದಿರಿ.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಡ ಕುಟುಂಬಗಳಿಗೆ ಸರ್ಕಾರ ರೇಷನ್ ಕಾರ್ಡ್ ಅನ್ನು ನೀಡುತ್ತದೆ. ರೇಷನ್ ಕಾರ್ಡ್ ಅನ್ನು ಹೊಂದಿರುವ ಫಲಾನುಭವಿಗಳು ರಾಜ್ಯ ಸರ್ಕಾರವು ನೀಡುತ್ತಿರುವ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬಹುದು.
ರೇಷನ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆಯ ಮೂಲಕ ಸರ್ಕಾರ ಪ್ರತಿ ತಿಂಗಳು ಉಚಿತವಾಗಿ ಪಡಿತರವನ್ನು ನೀಡುತ್ತದೆ. BPL ಕಾರ್ಡ್ ಹೊಂದಿರುವ ಫಲಾನುಭವಿಗಳ ಕುಟುಂಬದ ಪ್ರತಿ ಸದಸ್ಯರಿಗೆ ರಾಜ್ಯ ಸರ್ಕಾರವು 5 KG ಅಕ್ಕಿ ಹಾಗೂ ಉಳಿದ 5 KG ಅಕ್ಕಿಯ ಬದಲಿಗೆ DBT ಮೂಲಕ ಪ್ರತಿ ಕೆಜಿಗೆ 34 ರೂ. ರಂತೆ 5 KG ಗೆ 170 ರೂ. ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.
ಅನ್ನಭಾಗ್ಯ ಯೋಜನೆಯ ಪ್ರತಿ ಸದಸ್ಯರಿಗೆ 170 ರೂ. ರಂತೆ 23-01-2025 ರಂದು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.
Anna Bhagya Amount DBT Status Check 2025:
ನಿಮ್ಮ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿದೇಯಾ ಎಂಬುದನ್ನು ತಿಳಿಯಲು DBT Karnataka ಅಧಿಕೃತ App ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅಥವಾ ನಿಮ್ಮ ಬ್ಯಾಂಕ್ ಖಾತೆಯಯನ್ನು ಪರಿಶೀಲನೆ ಮಾಡಬಹುದು.
Anna Bhagya DBT Status Check Link: Check ಮಾಡಿ
ಇತರೆ ಮಾಹಿತಿಗಳನ್ನು ಓದಿ:
Realme P3 Pro 5G: ಫೆ. 18 ರಂದು ಬಿಡುಗಡೆಯಾಗಲಿದೆ ರಿಯಲ್‌ಮಿ P3 Pro ಸ್ಮಾರ್ಟ್’ಫೋನ್