ಪಿಯುಸಿ ವ್ಯಾಸಂಗ ಮಾಡುತ್ತಿರುವ ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCWD) ಸಿಹಿಸುದ್ದಿ ನೀಡಿದೆ.
2026-27 ನೇ ಶೈಕ್ಷಣಿಕ ಸಾಲಿನ ಮೆಟ್ರಿಕ್-ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಗ್ರಾಮೀಣ ಭಾಗದಿಂದ ಬಂದು ಪಟ್ಟಣಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಒದಗಿಸುವ ಉದ್ದೇಶದಿಂದ ಈ ಪ್ರವೇಶಾತಿಯನ್ನು ಆರಂಭಿಸಲಾಗಿದೆ. ಈ ಪ್ರಕಟಣೆಯು ಕೇವಲ ಪಿ.ಯು.ಸಿ ಮತ್ತು ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು BCWD ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
- SC ST ಮೆಟ್ರಿಕ್-ಪೂರ್ವ ಉಚಿತ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನ
- SC ST ಮೆಟ್ರಿಕ್ ನಂತರದ ಉಚಿತ ಹಾಸ್ಟೆಲ್ ಅರ್ಜಿ
Postmatric BCM Hostel Application 2026-27 ಸಂಕ್ಷಿಪ್ತ ವಿವರ:
- ಇಲಾಖೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCWD).
- ಸೌಲಭ್ಯ: ಮೆಟ್ರಿಕ್-ನಂತರದ ಉಚಿತ ವಿದ್ಯಾರ್ಥಿನಿಲಯಗಳು (ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್).
- ಶೈಕ್ಷಣಿಕ ಸಾಲು: 2026-27 ನೇ ಸಾಲಿಗೆ.
- ಯಾರಿಗೆ ಅನ್ವಯ: ಪಿ.ಯು.ಸಿ ಮತ್ತು ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ.
ಅರ್ಹತೆಗಳು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ಹಾಸ್ಟೆಲ್‌ಗಳಿಗೆ ಈ ಕೆಳಗಿನ ಪ್ರವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ:
- ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ (ಪ.ಜಾ) ಮತ್ತು ಪರಿಶಿಷ್ಟ ಪಂಗಡದ (ಪ.ವರ್ಗ) ವಿದ್ಯಾರ್ಥಿಗಳು.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ಈ ಕೆಳಕಂಡ ಮಿತಿಯೊಳಗಿರಬೇಕು:
- ಪ್ರವರ್ಗ-1, ಎಸ್.ಸಿ (SC) & ಎಸ್.ಟಿ (ST) ವಿದ್ಯಾರ್ಥಿಗಳಿಗೆ: ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷ.
- ಪ್ರವರ್ಗ-2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳಿಗೆ: ವಾರ್ಷಿಕ ಆದಾಯ ಮಿತಿ ರೂ. 1.00 ಲಕ್ಷ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://shp.karnataka.gov.in/bcwd ಮೂಲಕ ಆನ್‌ಲೈನ್‌ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು:
- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-06-2026.
BCM Postmatric Hostel Application 2026-27 ಪ್ರಮುಖ ಲಿಂಕ್‌ಗಳು:
- ಆನ್‌ಲೈನ್ ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
- ಇಲಾಖೆಯ ಅಧಿಕೃತ ವೆಬ್‌ಸೈಟ್: https://bcwd.karnataka.gov.in/
ಸಹಾಯವಾಣಿ: ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳಾದಲ್ಲಿ ವಿದ್ಯಾರ್ಥಿಗಳು ಸಹಾಯವಾಣಿ ಸಂಖ್ಯೆ 8050770004 ಗೆ ಸಂಪರ್ಕಿಸಬಹುದು. ಅಥವಾ, bcwdhelpline@gmail.com ಗೆ ಇ-ಮೇಲ್ ಮುಖಾಂತರ ದೂರು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಬಹುದು..
ಈ ಕೇಳಗಿನ ಸುದ್ದಿಗಳನ್ನು ಓದಿ:
SSLC Prize Money 2026: SSLC ಪಾಸಾದ ವಿದ್ಯಾರ್ಥಿಗಳಿಗೆ 15,000 ರೂ. ಪ್ರೋತ್ಸಾಹಧನ
ಸುಕನ್ಯಾ ಸಮೃದ್ಧಿ ಯೋಜನೆ: ದಿನಕ್ಕೆ ₹100 ಉಳಿಸಿ, ಲಕ್ಷ-ಲಕ್ಷ ಹಣ ಪಡೆಯಿರಿ