ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCWD) 2026-27 ನೇ ಶೈಕ್ಷಣಿಕ ಸಾಲಿಗೆ ಮೆಟ್ರಿಕ್ ಪೂರ್ವ (BCM Pre-Matric Hostel) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅಧಿಕೃತ ಪ್ರಕಟಣೆ ಹೊರಡಿಸಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಹಾಸ್ಟೆಲ್ಗಳಿಗೆ ಹೊಸದಾಗಿ ಸೇರಬಯಸುವ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯಾರು ಅರ್ಜಿ ಸಲ್ಲಿಸಬಹುದು?: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಈ ಉಚಿತ ಹಾಸ್ಟೆಲ್ ಸೌಲಭ್ಯಕ್ಕಾಗಿ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಪೋಷಕರ ವಾರ್ಷಿಕ ಆದಾಯ ಮಿತಿ ಎಷ್ಟು? ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ವರ್ಗಗಳ ಆಧಾರದ ಮೇಲೆ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:
- ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ: ವಾರ್ಷಿಕ ಆದಾಯ 1 ಲಕ್ಷ ರೂ. ಗಳ ಒಳಗಿರಬೇಕು.
- ಪ್ರವರ್ಗ-1, ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ವಿದ್ಯಾರ್ಥಿಗಳಿಗೆ: ವಾರ್ಷಿಕ ಆದಾಯ 2.50 ಲಕ್ಷ ರೂ. ಗಳ ಒಳಗಿರಬೇಕು.
BCM Pre-Matric Hostel 2026 ಅಗತ್ಯ ದಾಖಲೆಗಳು:
- ವಿದ್ಯಾರ್ಥಿಯ ಆಧಾರ್ ಕಾರ್ಡ್: ಇದು ಅತ್ಯಂತ ಪ್ರಮುಖ ದಾಖಲೆಯಾಗಿದ್ದು, ಆನ್ಲೈನ್ ಅರ್ಜಿಗೆ ಕಡ್ಡಾಯವಾಗಿದೆ.
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ: ವಿದ್ಯಾರ್ಥಿ ಅಥವಾ ಪೋಷಕರ ಹೆಸರಿನಲ್ಲಿರುವ ಚಾಲ್ತಿಯಲ್ಲಿರುವ ಪ್ರಮಾಣ ಪತ್ರ. (ಅರ್ಜಿ ಸಲ್ಲಿಸುವಾಗ ಇದರ RD ನಂಬರ್ (RD Number) ನಮೂದಿಸಬೇಕು).
- SATS ನಂಬರ್ (Student Tracking System Number): ವಿದ್ಯಾರ್ಥಿಯು ಶಾಲೆಯಲ್ಲಿ ಓದುತ್ತಿರುವ ಬಗೆಗಿನ ರಾಜ್ಯ ಸರ್ಕಾರದ ಶಾಲಾ ದಾಖಲಾತಿ ಸಂಖ್ಯೆ (ಇದನ್ನು ಶಾಲೆಯಲ್ಲಿ ಕೇಳಿ ಪಡೆಯಬಹುದು).
- ಹಿಂದಿನ ವರ್ಷದ ಅಂಕಪಟ್ಟಿ: ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ತೇರ್ಗಡೆಯಾಗಿರುವ ಅಂಕಪಟ್ಟಿ ಅಥವಾ ಶಾಲಾ ವ್ಯಾಸಂಗ ಪ್ರಮಾಣ ಪತ್ರ (Study Certificate).
- ಶಾಲಾ ಪ್ರವೇಶಾತಿ ರಶೀದಿ: ಪ್ರಸಕ್ತ (2026-27) ಶೈಕ್ಷಣಿಕ ಸಾಲಿಗೆ ಶಾಲೆಗೆ ದಾಖಲಾಗಿರುವ ಅಥವಾ ಶುಲ್ಕ ಪಾವತಿಸಿದ ರಶೀದಿ.
- ಬ್ಯಾಂಕ್ ಪಾಸ್ಬುಕ್: ವಿದ್ಯಾರ್ಥಿಯ ಹೆಸರಿನಲ್ಲಿರುವ ಹಾಗೂ ಆಧಾರ್ಗೆ ಲಿಂಕ್ ಆಗಿರುವ (NPCI ಮ್ಯಾಪ್ ಆಗಿರುವ) ಬ್ಯಾಂಕ್ ಖಾತೆಯ ಮುಖಪುಟದ ಪ್ರತಿ.
- Passport Size ಭಾವಚಿತ್ರ: ವಿದ್ಯಾರ್ಥಿಯ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ.
- ವಾಸಸ್ಥಳ ದೃಢೀಕರಣ ಪತ್ರ: (ಅಗತ್ಯವಿದ್ದರೆ ಮಾತ್ರ).
ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ಇಲಾಖೆಯ ಅಧಿಕೃತ ಪೋರ್ಟಲ್ https://shp.karnataka.gov.in/bcwd ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-06-2026.
BCM Pre-Matric Hostel 2026-27 Application ಪ್ರಮುಖ ಲಿಂಕ್ಗಳು:
- ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
- ಇಲಾಖೆಯ ಅಧಿಕೃತ ವೆಬ್ಸೈಟ್: https://bcwd.karnataka.gov.in/
ಹೆಚ್ಚಿನ ಮಾಹಿತಿಗಾಗಿ: ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ಪಟ್ಟಿ, ಪ್ರವೇಶಕ್ಕೆ ಇರಬೇಕಾದ ಇತರೆ ನಿಖರ ಅರ್ಹತೆಗಳು ಹಾಗೂ ಸಲ್ಲಿಸಬೇಕಾದ ಅಗತ್ಯ ದಾಖಲೆಗಳ ವಿವರಗಳನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ವೀಕ್ಷಿಸಬಹುದು.
ಸಹಾಯವಾಣಿ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಇಲಾಖೆಯ ಇ-ಮೇಲ್ bcwdhelpline@gmail.com ಗೆ ಮೇಲ್ ಮಾಡಬಹುದು ಅಥವಾ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಬಹುದು. ಜೊತೆಗೆ, ಅಗತ್ಯ ದಾಖಲೆಗಳೊಂದಿಗೆ ತಮ್ಮ ಸಮೀಪದ ಜಿಲ್ಲಾ ಅಥವಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಚೇರಿ ಅಧಿಕಾರಿಗಳನ್ನು ಖುದ್ದಾಗಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
ಈ ಕೇಳಗಿನ ಸುದ್ದಿಗಳನ್ನು ಓದಿ:
ವಿದ್ಯಾರ್ಥಿಗಳಿಗೆ ₹35 ಸಾವಿರ ಪ್ರೋತ್ಸಾಹಧನ; ಆನ್ಲೈನ್ ಅರ್ಜಿ ಆಹ್ವಾನ
SSLC Prize Money 2026: SSLC ಪಾಸಾದ ವಿದ್ಯಾರ್ಥಿಗಳಿಗೆ 15,000 ರೂ. ಪ್ರೋತ್ಸಾಹಧನ