ಆರೋಗ್ಯ ಇಲಾಖೆ ನೇಮಕಾತಿ 2026, ಅರ್ಹರು ಗಮನಿಸಿ

Telegram Group Join Now
WhatsApp Group Join Now

ಸಿಲಿಕಾನ್ ಸಿಟಿಯಲ್ಲಿ ಸರ್ಕಾರಿ ವಲಯದ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವ ನರ್ಸಿಂಗ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಇಲ್ಲಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (NHM) ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS) 55 ‘ಶುಶ್ರೂಷಣಾಧಿಕಾರಿ’ (Nursing Officer) ಹುದ್ದೆಗಳನ್ನು ಭರ್ತಿ ಮಾಡಲು ವಾಕ್-ಇನ್ ಸಂದರ್ಶನ ಆಯೋಜಿಸಿದೆ.

ವಿಶೇಷವೆಂದರೆ, ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ನೇಮಕಾತಿ ಹೈಲೈಟ್ಸ್:

  • ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೆಂಗಳೂರು ನಗರ.
  • ಹುದ್ದೆಯ ಹೆಸರು: ಶುಶ್ರೂಷಣಾಧಿಕಾರಿಗಳು (Nursing Officers).
  • ಒಟ್ಟು ಹುದ್ದೆಗಳು: 55.
  • ವೇತನ: ಮಾಸಿಕ ₹18,714/-
  • ನೇಮಕಾತಿ ಮಾದರಿ: ಗುತ್ತಿಗೆ ಆಧಾರ (NHM ಅಡಿಯಲ್ಲಿ).

ಅರ್ಹತೆಗಳು:

ಅಧಿಸೂಚನೆಯಲ್ಲಿ ತಿಳಿಸಿರುವಂತೆ ಈ ಕೆಳಗಿನ ಅರ್ಹತೆ ಇರುವವರು ಮಾತ್ರ ಸಂದರ್ಶನಕ್ಕೆ ಹಾಜರಾಗಬೇಕು:

  1. ವಿದ್ಯಾರ್ಹತೆ: ಮಾನ್ಯತೆ ಪಡೆದ ನರ್ಸಿಂಗ್ ಶಾಲೆಯಲ್ಲಿ GNM ಅಥವಾ B.Sc Nursing ಪದವಿ ಪಡೆದಿರಬೇಕು.
  2. ನೋಂದಣಿ: ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ (KNC) ನೋಂದಣಿ ಹೊಂದಿರುವುದು ಕಡ್ಡಾಯ.
  3. ಕಂಪ್ಯೂಟರ್ ಜ್ಞಾನ: ಕಂಪ್ಯೂಟರ್ ಸಾಕ್ಷರತೆ ಹೊಂದಿರಬೇಕು.
  4. ವಯೋಮಿತಿ: 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  5. ವಿಶೇಷ ಸೂಚನೆ: ಈ ಹುದ್ದೆಗಳು ಕೇವಲ ಮಹಿಳಾ ಅಭ್ಯರ್ಥಿಗಳಿಗೆ (Female Candidates Only) ಮೀಸಲಾಗಿವೆ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಹುದ್ದೆಗಳ ವಿವರ:

  • ಕೆ.ಸಿ ಜನರಲ್ ಆಸ್ಪತ್ರೆ: 21
  • ಜಯನಗರ ಸಾರ್ವಜನಿಕ ಆಸ್ಪತ್ರೆ: 19
  • ಸಿ.ವಿ ರಾಮನ್ ನಗರ ಆಸ್ಪತ್ರೆ: 08
  • ಕೆ.ಆರ್ ಪುರಂ ಆಸ್ಪತ್ರೆ: 03
  • ಆನೇಕಲ್ ಆಸ್ಪತ್ರೆ: 02
  • ಯಲಹಂಕ ಆಸ್ಪತ್ರೆ: 02

ಪ್ರಮುಖ ದಿನಾಂಕಗಳು:

ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 27-01-2026, 02-02-2026, 09-02-2026, 16-02-2026, 23-02-2026, 02-03-2026, 09-03-2026, 16-03-2026 ದಿನಾಂಕಗಳಂದು ಮಾತ್ರ ಬೆಳ್ಳಿಗೆ 10:30 ಗಂಟೆಯಿಂದ ಮಧ್ಯಾಹ್ನ 01:00 ಗಂಟೆ ಒಳಗಾಗಿ ತಮ್ಮ ಮೂಲ ದಾಖಲೆಗಳೊಂದಿಗೆ ಹಾಗೂ ನಕಲು ಪ್ರತಿಗಳೊಂದಿಗೆ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಆವರಣ, ಹಳೇ ಟಿ.ಬಿ ಆಸ್ಪತ್ರೆ, ಹಳೇ ಮದ್ರಾಸ್ ರಸ್ತೆ, ಸ್ವಾಮಿ ವಿವೇಕನಂದ ಮೇಟ್ರೋ ನಿಲ್ದಾಣದ ಹತ್ತಿರ, ಇಂದಿರಾನಗರ, ಬೆಂಗಳೂರು-38 ನಿಗದಿತ ಅರ್ಜಿ ನಮೂನೆಯನ್ನು ಪಡೆದು ನೋಂದಣಿ ಮಾಡಿಕೊಂಡು, ನೋಂದಣಿಯಾದ ಅರ್ಹ ಅಭ್ಯರ್ಥಿಗಳನ್ನು ಮಾತ್ರ ದಾಖಲಾತಿ ಪರಿಶೀಲನೆಗೆ ಪರಿಗಣಿಸಲಾಗುವುದು ಹಾಗೂ ಪ್ರಸ್ತುತ ಖಾಲಿ ಇರುವ ಹುದ್ದೆಗಳ ಆಧಾರದ ಮೇಲೆ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂಬ ಷರತಿಗೆ ಒಳಪಟ್ಟಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

  • ಜನವರಿ: 27-01-2026.
  • ಫೆಬ್ರವರಿ: 02-02-2026, 09-02-2026, 16-02-2026, 23-02-2026.
  • ಮಾರ್ಚ್: 02-03-2026, 09-03-2026, 16-03-2026.

SSLC ಪಾಸಾದವರಿಗೆ RBI ನಲ್ಲಿ ಬಂಪರ್ ಉದ್ಯೋಗ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment