Fire Department Recruitment: ಅಗ್ನಿಶಾಮಕ ದಳದಲ್ಲಿ 1,600 ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ: ಸಚಿವ ಡಾ. ಜಿ. ಪರಮೇಶ್ವರ್

Telegram Group Join Now
WhatsApp Group Join Now

ಸಮವಸ್ತ್ರ ಧರಿಸಿ ದೇಶಸೇವೆ ಮಾಡಬೇಕು, ಅದರಲ್ಲೂ ಪೊಲೀಸ್ ಅಥವಾ ಅಗ್ನಿಶಾಮಕ ದಳದಲ್ಲಿ (Fire Department Recruitment) ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಕನಸು ಕಾಣುತ್ತಿರುವ ರಾಜ್ಯದ ಯುವಜನತೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 1,600 ವಿವಿಧ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವುದಾಗಿ ಅವರು ಘೋಷಿಸಿದ್ದಾರೆ.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಆರ್.ಎ. ಮುಂಡ್ಕುರ್ ಅಗ್ನಿಶಾಮಕ ತರಬೇತಿ ಅಕಾಡೆಮಿಯಲ್ಲಿ ಮಂಗಳವಾರ ನಡೆದ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ ಹಾಗೂ 40 ಹೊಸ ಅಗ್ನಿಶಾಮಕ ಜಲ ವಾಹನಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲಾಖೆಯ ಮೇಲ್ದರ್ಜೆಗೇರಿಸುವಿಕೆ ಹಾಗೂ ಮುಂಬರುವ ಬೃಹತ್ ನೇಮಕಾತಿಯ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡರು.

Fire Department Recruitment 2026 ಪ್ರಮುಖ ಹೈಲೈಟ್ಸ್:

  • 1,600 ಹುದ್ದೆಗಳಿಗೆ ಶೀಘ್ರ ನೇಮಕಾತಿ: ಅಗ್ನಿಶಾಮಕ ಇಲಾಖೆಯಲ್ಲಿ ಪ್ರಸ್ತುತ 1600ಕ್ಕೂ ಹೆಚ್ಚು ಸಿಬ್ಬಂದಿಯ ಕೊರತೆಯಿದ್ದು, ಈ ಹುದ್ದೆಗಳ ಭರ್ತಿಗೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಹಣಕಾಸು ಇಲಾಖೆಯ ಒಪ್ಪಿಗೆ ಪಡೆದು ಅಧಿಕೃತ ಅಧಿಸೂಚನೆ ಪ್ರಕಟಿಸಲಾಗುವುದು.
  • 15 ಹೊಸ ಅಗ್ನಿಶಾಮಕ ಠಾಣೆ ನಿರ್ಮಾಣ: ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 15 ತಾಲೂಕುಗಳಲ್ಲಿ ನೂತನ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲು ಸಿಎಂಗೆ ಕೋರಿಕೆ ಸಲ್ಲಿಸಲಾಗಿದೆ. (ಈಗಾಗಲೇ 15ನೇ ಹಣಕಾಸು ಯೋಜನೆಯಡಿ 21 ಠಾಣೆಗಳ ನಿರ್ಮಾಣಕ್ಕೆ 98 ಕೋಟಿ ರೂ. ಖರ್ಚು ಮಾಡಲಾಗಿದೆ).
  • ಸಿಬ್ಬಂದಿಗೆ ಸುಸಜ್ಜಿತ ವಸತಿ ಗೃಹ: ಪೊಲೀಸ್ ಗೃಹ ಯೋಜನೆಯಡಿ ಪೊಲೀಸರಿಗೆ 40 ಸಾವಿರ ಮನೆ ಕಟ್ಟಿಕೊಟ್ಟ ಮಾದರಿಯಲ್ಲೇ, ಅಗ್ನಿಶಾಮಕ ಸಿಬ್ಬಂದಿಗಳಿಗೂ ಸುಸಜ್ಜಿತ ವಸತಿ ಗೃಹಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದ್ದು, ಶೀಘ್ರವೇ ಅನುದಾನ ಒದಗಿಸಲಿದೆ.
  • ಹೈಟೆಕ್ ವಾಹನಗಳ ಸೇರ್ಪಡೆ: ಬೆಂಗಳೂರಿನಂತಹ ಮಹಾನಗರಗಳಲ್ಲಿ ಬಹುಮಹಡಿ ಕಟ್ಟಡಗಳು ಹೆಚ್ಚಾಗುತ್ತಿವೆ. ಇಲ್ಲಿ ಬೆಂಕಿ ಅವಘಡ ಸಂಭವಿಸಿದಾಗ ಕಾರ್ಯಾಚರಣೆ ನಡೆಸಲು ಅನುಕೂಲವಾಗುವಂತೆ, ದೇಶದಲ್ಲೇ ಪ್ರಥಮ ಬಾರಿಗೆ 90 ಮೀಟರ್ ಎತ್ತರ ತಲುಪಬಲ್ಲ ಅತ್ಯಾಧುನಿಕ ‘ಏರಿಯಲ್ ಲ್ಯಾಡರ್ ಫ್ಲಾಟ್‌ಫಾರ್ಮ್’ ವಾಹನವನ್ನು ಇಲಾಖೆಗೆ ಸೇರ್ಪಡೆಗೊಳಿಸಲಾಗಿದೆ.

ಸಿಬ್ಬಂದಿ ಕಾರ್ಯವೈಖರಿಗೆ ಸಚಿವರ ಬಹುಪರಾಕ್: “ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಶಿಸ್ತಿನ ಸಿಪಾಯಿಗಳು. ವಿಪತ್ತಿನ ಸಮಯದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಾರೆ. ಮಡಿಕೇರಿ ಪ್ರವಾಹದಂತಹ ಸಂಕಷ್ಟದ ಸಮಯದಲ್ಲಿ ಇವರ ಸೇವೆ ಮತ್ತು ಸಮಯಪ್ರಜ್ಞೆ ಶ್ಲಾಘನೀಯ. ರಾಷ್ಟ್ರಮಟ್ಟದಲ್ಲಿ ನಮ್ಮ ಇಲಾಖೆ ಹೆಸರು ಗಳಿಸಿದ್ದು, ಇಡೀ ದೇಶಕ್ಕೆ ಕರ್ನಾಟಕ ಅಗ್ನಿಶಾಮಕ ದಳ ಮಾದರಿಯಾಗಿದೆ” ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

“ಅಗ್ನಿಶಾಮಕ ದಳದ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆ ಜೊತೆಗೆ ದೈಹಿಕ ಸಾಮರ್ಥ್ಯ ಪರೀಕ್ಷೆ (Physical Test) ಅತ್ಯಂತ ನಿರ್ಣಾಯಕವಾಗಿರುತ್ತದೆ. 1,600 ಹುದ್ದೆಗಳ ನೇಮಕಾತಿ ಇದಾಗಿರುವುದರಿಂದ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಸೂಚನೆ ಬರುವವರೆಗೆ ಕಾಯದೆ, ಇಂದಿನಿಂದಲೇ ಓಟ ಹಾಗೂ ದೈಹಿಕ ತಾಲೀಮು ಆರಂಭಿಸುವುದು ಜಾಣತನ.”

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2026

Telegram Group Join Now
WhatsApp Group Join Now

Leave a Comment