ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ; ಆನ್‌ಲೈನ್ ಅರ್ಜಿ ಆಹ್ವಾನ | Free Sewing Machine Scheme 2025 Karnataka How to Apply Online?

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರಿಗೆ ಸಿಹಿ ಸುದ್ದಿ. 2025-26 ನೇ ಸಾಲಿನ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಈ ಯೋಜನೆಗೆ ಅರ್ಜಿ ಸಲ್ಲಿಸಿ ಇದರ ಲಾಭ ಪಡೆದುಕೊಳ್ಳಬಹುದು.

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಹೊಲಿಗೆ ಯಂತ್ರವನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಈ ಯೋಜನೆಯ ಅಡಿಯಲ್ಲಿ ಹೊಲಿಗೆ ಯಂತ್ರ ಪಡೆಯಬಯಸುವವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಹತೆಗಳು:

  • ಅರ್ಜಿದಾರರು ಮರಾಠ ಸಮುದಾಯದ ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್) ವರೆಗೆ ಸೇರಿರಬೇಕು.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3B ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು).
  • ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು.
  • ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.
  • ಒಂದು ಕುಟುಂಬದ ಒಬ್ಬ ಸದಸ್ಯರನ್ನು ಮಾತ್ರ ಸೌಲಭ್ಯ ದೊರೆಯಲಿದೆ.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ 98.000 ರೂ. ಹಾಗೂ ನಗರ ಪ್ರದೇಶದಲ್ಲಿ 1,20.000 ರೂ.ಗಳನ್ನು ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕವೇ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:
ಪ್ರಕಟಣೆ ದಿನಾಂಕ: 05-11-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-12-2025

Free Sewing Machine Scheme 2025 Online Application Link:
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: kmcdc.karnataka.gov.in

ಸಹಾಯವಾಣಿ ಸಂಖ್ಯೆ: 8867537799/ ದೂ.ಸಂ: 080-29903994

Kisan Tractor Scheme: ಟ್ರ್ಯಾಕ್ಟರ್ ಖರೀದಿಸಲು 50% ಸಬ್ಸಿಡಿ; ಅರ್ಜಿ ಸಲ್ಲಿಸಿ

ಸ್ವಂತ ವಾಹನ ಖರೀದಿಸಲು 3 ಲಕ್ಷ ರೂ. ಸಹಾಯಧನ

ಗಂಗಾ ಕಲ್ಯಾಣ ಯೋಜನೆ 2025-26

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment