ನರ್ಸಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿಯು (KSDNEB) 2026-27ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಇನ್ ನರ್ಸಿಂಗ್ ಅಂಡ್ ಮಿಡ್ವೈಫರಿ (GNM) ಕೋರ್ಸ್ ಪ್ರವೇಶಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ.
ಸರ್ಕಾರಿ ಶುಶ್ರೂಷಾ (ನರ್ಸಿಂಗ್) ಶಾಲೆಗಳು ಹಾಗೂ ಖಾಸಗಿ ನರ್ಸಿಂಗ್ ಶಾಲೆಗಳಲ್ಲಿ ಲಭ್ಯವಿರುವ ಶೇ. 10ರಷ್ಟು ಸರ್ಕಾರಿ ಕೋಟಾದ ಸೀಟುಗಳ ಭರ್ತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿ ಪಾಸಾಗಿರುವ ವಿದ್ಯಾರ್ಥಿಗಳು, ಸೇವಾ ನಿರತ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು (PHCO) ಹಾಗೂ ಎ.ಎನ್.ಎಂ (ANM) ನೌಕರರು ಈ ಕೋರ್ಸ್ಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಸಕ್ತ ಅಭ್ಯರ್ಥಿಗಳು ಮಂಡಳಿಯ ಅಧಿಕೃತ ವೆಬ್ಸೈಟ್ ಮೂಲಕ ಮೇ 20, 2026ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
GNM Nursing Admission 2026 ಸಂಕ್ಷಿಪ್ತ ವಿವರ:
- ಪ್ರವೇಶಾತಿ ಮಂಡಳಿ: ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿ, ಬೆಂಗಳೂರು
- ಕೋರ್ಸ್ ಹೆಸರು: ಡಿಪ್ಲೋಮಾ ಇನ್ ನರ್ಸಿಂಗ್ ಅಂಡ್ ಮಿಡ್ವೈಫರಿ (GNM)
- ಶೈಕ್ಷಣಿಕ ಸಾಲು: 2026-27
- ತರಬೇತಿ ಅವಧಿ: 3 ವರ್ಷಗಳು
- ವ್ಯಾಸಂಗ ಸ್ಥಳ: ಕರ್ನಾಟಕದ ಸರ್ಕಾರಿ ಮತ್ತು ಖಾಸಗಿ ನರ್ಸಿಂಗ್ ಶಾಲೆಗಳು
ಕೋರ್ಸ್ ಪ್ರವೇಶಾತಿ ವಿವರ:
ಶೈಕ್ಷಣಿಕ ಅರ್ಹತೆ:
- ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ (10+2) ಪರೀಕ್ಷೆಯಲ್ಲಿ ಕನಿಷ್ಠ ಶೇ. 40ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು (ವಿಜ್ಞಾನ ವಿಭಾಗದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು).
- ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ ಶೇ. 5ರಷ್ಟು ವಿನಾಯಿತಿ ಇದ್ದು, ಕನಿಷ್ಠ ಶೇ. 35 ಅಂಕ ಪಡೆದವರು ಅರ್ಜಿ ಸಲ್ಲಿಸಬಹುದು.
- ದ್ವಿತೀಯ ಪಿಯುಸಿಯಲ್ಲಿ ಇಂಗ್ಲಿಷ್ ವಿಷಯವನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿರಬೇಕು.
- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ಮೂಲಕ 10+2 ಉತ್ತೀರ್ಣರಾದವರೂ ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
- ಕನಿಷ್ಠ 1ನೇ ತರಗತಿಯಿಂದ 12ನೇ ತರಗತಿಯವರೆಗೆ 7 ವರ್ಷಗಳ ಕಾಲ ಕರ್ನಾಟಕದಲ್ಲಿ ವ್ಯಾಸಂಗ ಮಾಡಿರಬೇಕು.
ವಯೋಮಿತಿ:
- ಡಿಸೆಂಬರ್ 31, 2026ಕ್ಕೆ ಅಭ್ಯರ್ಥಿಗೆ ಕಡ್ಡಾಯವಾಗಿ 17 ವರ್ಷ ವಯಸ್ಸು ತುಂಬಿರಬೇಕು.
ವಿಶೇಷ ಷರತ್ತುಗಳು (ಗಮನಿಸಿ):
- 3 ವರ್ಷದ ತರಬೇತಿ ಅವಧಿಯಲ್ಲಿ ಸರ್ಕಾರಿ ನರ್ಸಿಂಗ್ ಶಾಲೆಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ವಿವಾಹವಾಗುವಂತಿಲ್ಲ.
- ಗರ್ಭಿಣಿ ಅಭ್ಯರ್ಥಿಗಳಿಗೆ ತರಬೇತಿಗೆ ಸೇರಲು ಅವಕಾಶವಿರುವುದಿಲ್ಲ.
- ಸರ್ಕಾರಿ ನರ್ಸಿಂಗ್ ಶಾಲೆಗಳಲ್ಲಿ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಮಾತ್ರ ನಿಯಮಾನುಸಾರ ಶಿಷ್ಯವೇತನ (Stipend) ನೀಡಲಾಗುತ್ತದೆ.
- ಸರ್ಕಾರಿ ನರ್ಸಿಂಗ್ ಶಾಲೆಗಳಲ್ಲಿ ಒಟ್ಟು ಸೀಟುಗಳ ಪೈಕಿ ಶೇ. 5ರಷ್ಟು ಸೀಟುಗಳನ್ನು ಪುರುಷ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
ಅರ್ಜಿ ಶುಲ್ಕ:
- ಸಾಮಾನ್ಯ ಮತ್ತು ಓಬಿಸಿ ವರ್ಗದ ಅಭ್ಯರ್ಥಿಗಳಿಗೆ: ರೂ. 400/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ: ರೂ. 250/-
- ಶುಲ್ಕವನ್ನು ಕಡ್ಡಾಯವಾಗಿ ಆನ್ಲೈನ್ (ಇ-ಪೇಮೆಂಟ್) ಮುಖಾಂತರವೇ ಪಾವತಿಸಬೇಕು.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30-04-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-05-2026
ಪ್ರಮುಖ ಲಿಂಕ್ಗಳು:
- ಅಧಿಸೂಚನೆ: ಡೌನ್ಲೋಡ್
- ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
- ಅಧಿಕೃತ ವೆಬ್ಸೈಟ್: www.ksdneb.org
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ಸೈಟ್ (www.ksdneb.org) ಗೆ ಭೇಟಿ ನೀಡಬೇಕು.
- ಮುಖಪುಟದಲ್ಲಿರುವ “GNM Admission 2026-27” ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಆನ್ಲೈನ್ ಅರ್ಜಿಯಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ.
- ದ್ವಿತೀಯ ಪಿಯುಸಿ ಅಂಕಪಟ್ಟಿ, ಎಸ್ಎಸ್ಎಲ್ಸಿ ಅಂಕಪಟ್ಟಿ, ಜಾತಿ/ಆದಾಯ ಪ್ರಮಾಣಪತ್ರ, ದೈಹಿಕ ದೃಢತೆ ಪ್ರಮಾಣಪತ್ರ ಹಾಗೂ 7 ವರ್ಷಗಳ ವ್ಯಾಸಂಗ ಪ್ರಮಾಣಪತ್ರಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ನಿಗದಿತ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ, ಅರ್ಜಿಯನ್ನು ‘Submit’ ಮಾಡಿ.