Govt Scholarship 2025: 5,000 ರೂ. ದಿಂದ 1 ಲಕ್ಷ ರೂ. ವರೆಗೆ ಸರ್ಕಾರದಿಂದ ಪ್ರೋತ್ಸಾಹಧನ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಅರ್ಚಕರು ಮತ್ತು ನೌಕರರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಸಕ್ತರು ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಮತ್ತು ನೌಕರರ ಮಕ್ಕಳಿಗೆ 2024–25 ಶೈಕ್ಷಣಿಕ ಸಾಲಿನಲ್ಲಿ ಪ್ರೋತ್ಸಾಹಧನ್ನು ಇಲಾಖೆಯು ನೀಡುತ್ತಿದೆ.

ಈ ಕೋರ್ಸ್‌ಗಳಿಗೆ ಅನುಗುಣವಾಗಿ ಪ್ರೋತ್ಸಾಹಧನ:

  • PUC, ITI, JOC, ಅಥವಾ ಡಿಪ್ಲೋಮಾ ವಿದ್ಯಾರ್ಥಿಗಳಿಗೆ: 5,000 ರೂ.
  • ಪದವಿ ವಿದ್ಯಾರ್ಥಿಗಳಿಗೆ: 7,000 ರೂ.
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ: 15,000 ರೂ.
  • ಆಯುರ್ವೇದ, ಹೋಮಿಯೋಪತಿ, ಯುನಾನಿ ಸೇರಿದಂತೆ ಇತರೆ ವೈದ್ಯಕೀಯ ಕೋರ್ಸ್‌ಗಳು ಮತ್ತು ತಾಂತ್ರಿಕ/ಇಂಜಿನಿಯರಿಂಗ್ ಕೋರ್ಸ್‌ಗಳಿಗೆ: 25,000 ರೂ.
  • ಮೆಡಿಕಲ್/ಡೆಂಟಲ್ ವಿದ್ಯಾಭ್ಯಾಸಕ್ಕೆ: 50,000 ರೂ.
  • ವಿದೇಶದಲ್ಲಿ ವ್ಯಾಸಂಗಕ್ಕೆ: 1,00,000 ರೂ.

ಅರ್ಜಿ ಸಲ್ಲಿಸುವ ವಿಧಾ‌ನ:
ಆಸಕ್ತರು ಧಾರ್ಮಿಕ ದತ್ತಿ ಆಯುಕ್ತರ ಕಚೇರಿ, ಸಂಬಂಧಪಟ್ಟ ಜಿಲ್ಲಾಧಿಕಾರಿ ಕಚೇರಿ ಅಥವಾ ತಾಲೂಕು ತಹಶಿಲ್ದಾರ್ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31-12-2025

ಹೆಚ್ಚಿನ ಮಾಹಿತಿಗಾಗಿ ಧಾರ್ಮಿಕ ದತ್ತಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

CIBIL Score: ಗುಡ್‌ ನ್ಯೂಸ್; ಸಿಬಿಲ್ ಸ್ಕೋರ್ ಇಲ್ಲದೆಯೂ ಸಾಲ ಪಡೆಯಬಹುದು: ಹಣಕಾಸು ಸಚಿವಾಲಯ

Mahindra Scholarship 2025: ಮಹೀಂದ್ರಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment