ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಬಾಕಿ ಹಣ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Telegram Group Join Now
WhatsApp Group Join Now

ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ಕೋಟ್ಯಂತರ ಮಹಿಳೆಯರಿಗೆಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ಕೇವಲ 4 ರಿಂದ 5 ದಿನಗಳಲ್ಲಿ ಬಾಕಿ ಇರುವ ಗೃಹಲಕ್ಷ್ಮಿ ಹಣ ಜಮೆಯಾಗಲಿದೆ.

ಹೌದು, ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಹಣವನ್ನು ಹಂತಹಂತವಾಗಿ ಬಿಡುಗಡೆ ಮಾಡಲು ಇಲಾಖೆ ಸಜ್ಜಾಗಿದ್ದು, ಮುಂದಿನ 4-5 ದಿನಗಳಲ್ಲೇ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ (DBT) ಮೂಲಕ ಹಣ ತಲುಪಲಿದೆ ಎಂದು ಸ್ವತಃ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ತಾಲ್ಲೂಕಿನ ಬಾಕನೂರು ಗ್ರಾಮದಲ್ಲಿ ಸೋಮವಾರ ಜರುಗಿದ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ವೇಳೆ, ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಹಣವನ್ನು ಹಂತಹಂತವಾಗಿ ಬಿಡುಗಡೆ ಮಾಡಲು ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ಅವರು ವಿವರಿಸಿದರು.

ಹಂತಹಂತವಾಗಿ ಎರಡು ಕಂತಿನ ಹಣ ಬಿಡುಗಡೆ:

ಮಹಿಳೆಯರ ಖಾತೆಗೆ ಹಣ ಜಮೆಯಾಗುವ ಕಾಲಮಿತಿಯನ್ನು ಸಚಿವರು ಈ ಕೆಳಗಿನಂತೆ ಹಂಚಿಕೊಂಡಿದ್ದಾರೆ:

  • 4 ರಿಂದ 5 ದಿನಗಳಲ್ಲಿ: ಮಾರ್ಚ್ ತಿಂಗಳ ಕಂತಿನ ಹಣವು ಮುಂದಿನ ನಾಲ್ಕೈದು ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ (DBT) ಮೂಲಕ ಜಮೆಯಾಗಲಿದೆ.
  • 8 ರಿಂದ 10 ದಿನಗಳಲ್ಲಿ: ಮಾರ್ಚ್ ತಿಂಗಳ ಹಣ ಪಾವತಿಯಾದ ಬೆನ್ನಲ್ಲೇ, ಅಂದರೆ ಇಂದಿನಿಂದ 8 ರಿಂದ 10 ದಿನಗಳ ಒಳಗೆ ‘ಏಪ್ರಿಲ್’ ತಿಂಗಳ ಮೊತ್ತವೂ ಕೂಡ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ.

ಲೇಬರ್ ಕಾರ್ಡ್ ಇದ್ದವರಿಗೆ ₹60,000 ಉಚಿತ ಸಹಾಯಧನ

ಕರ್ನಾಟಕದಲ್ಲಿ ಇಂದಿನ ಬಂಗಾರದ ದರ ಎಷ್ಟು?

ರೇಷನ್ ಕಾರ್ಡ್ ತಿದ್ದುಪಡಿ 2026 ಆರಂಭ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment