ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಸೇರಿದಂತೆ ಗ್ಯಾರಂಟಿ ಯೋಜನೆಗಳು ಶೀಘ್ರದಲ್ಲೇ ಸ್ಥಗಿತಗೊಳ್ಳಲಿವೆ ಎಂಬ ವದಂತಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ತೆರೆ ಎಳೆದಿದ್ದಾರೆ.
“ಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ, ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ದೃಢೀಕರಣಕ್ಕಾಗಿ ಸರ್ಕಾರ ಮರುಪರಿಶೀಲನೆ ಪ್ರಕ್ರಿಯೆ ಆರಂಭಿಸಿದ ಬೆನ್ನಲ್ಲೇ, ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಸುಳ್ಳು ಪ್ರಚಾರ ನಡೆಸುತ್ತಿವೆ.
ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಖಾತೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಮರುಪರಿಶೀಲನೆ ಯಾಕೆ? ನಕಲಿಗಳಿಗೆ ಬೀಳಲಿದೆ ಬ್ರೇಕ್:
ಸರ್ಕಾರದ ಗ್ಯಾರಂಟಿ ಯೋಜನೆಗಳು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯಲಿವೆ. ಆದರೆ, ಇತ್ತೀಚೆಗೆ ಕೆಲವರು ಮೃತಪಟ್ಟವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಕೌಂಟ್ ತೆರೆದು ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಸಾರ್ವಜನಿಕರ ತೆರಿಗೆ ಹಣ ಪೋಲಾಗುವುದನ್ನು ತಡೆಯಲು ಸರ್ಕಾರ ಈ ಕ್ರಮ ಕೈಗೊಂಡಿದೆ.
GruhaLakshmi Scheme ಮತ್ತೆ ಅರ್ಜಿ ಸಲ್ಲಿಕೆ ಅನಿವಾರ್ಯವೇ?:
ನಕಲಿ ಫಲಾನುಭವಿಗಳನ್ನು ಪತ್ತೆ ಹಚ್ಚುವ ಉದ್ದೇಶದಿಂದಲೇ ಈಗಿರುವ ಫಲಾನುಭವಿಗಳ ಹೆಸರು, ವಿಳಾಸ ಮತ್ತು ಅಕೌಂಟ್ ನಂಬರ್ ಖಚಿತಪಡಿಸಿಕೊಳ್ಳಲು ಮರುಪರಿಶೀಲನೆ (Re-verification) ಮಾಡಲಾಗುತ್ತಿದೆ.
ದೃಢೀಕರಣಕ್ಕಾಗಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಹೇಳಲಾಗಿದೆಯೇ ಹೊರತು, ಇದು ಯೋಜನೆಗಳನ್ನು ನಿಲ್ಲಿಸುವ ಕ್ರಮವಲ್ಲ. ಬದಲಾಗಿ, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಮಾಡುವ ಪ್ರಾಮಾಣಿಕ ಪ್ರಯತ್ನವಾಗಿದೆ ಎಂದು ಸರ್ಕಾರ ತಿಳಿಸಿದೆ.
ಫಲಾನುಭವಿಗಳಿಗೆ ಸಿಎಂ ಅಭಯ:
“ನೈಜ ಫಲಾನುಭವಿಗಳು ಯಾವುದೇ ಕಾರಣಕ್ಕೂ ಆತಂಕಪಡುವ ಅವಶ್ಯಕತೆ ಇಲ್ಲ. ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ,” ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ನೈಜ ಫಲಾನುಭವಿಗಳು ತಮ್ಮ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಿಕೊಂಡರೆ ಸಾಕು, ಸರ್ಕಾರದಿಂದ ಸಿಗುವ ಸೌಲಭ್ಯಗಳು ನಿರಂತರವಾಗಿ ಲಭ್ಯವಾಗಲಿವೆ.
ಈ ಕೇಳಗಿನ ಸುದ್ದಿಗಳನ್ನು ಓದಿ:
ಗೃಹಲಕ್ಷ್ಮಿ, ಗೃಹಜ್ಯೋತಿ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ: ಸಿಎಂ ಡಿಕೆಶಿ ಹೊಸ ರೂಲ್ಸ್
ಏರ್ಟೆಲ್ ವಿದ್ಯಾರ್ಥಿವೇತನ 2026: ಉಚಿತ ಲ್ಯಾಪ್ಟಾಪ್, 100% ಶುಲ್ಕ ವಿನಾಯಿತಿ
ವಿದ್ಯಾರ್ಥಿಗಳಿಗೆ ₹35 ಸಾವಿರ ಪ್ರೋತ್ಸಾಹಧನ; ಆನ್ಲೈನ್ ಅರ್ಜಿ ಆಹ್ವಾನ