ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ 2,000 ರೂ. ಹಣ ನಿಮ್ಮ ಖಾತೆಗೆ ಜಮಾ ಆಗಿದೇಯಾ?
ಹೌದು ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಕಳೆದ ವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣವನ್ನು ಬಿಡುಗಡೆಗೆ ಆರ್ಥಿಕ ಇಲಾಖೆಯು ಒಪ್ಪಿಗೆ ನೀಡಿದೆ, ಡಿಸೆಂಬರ್ 27ರ ಒಳಗಾಗಿ ಅರ್ಹ ಫಲಾನುಭವಿಗಳ ಖಾತೆಗಳಿಗೆ ಹಣ ಜಮಾ ಮಾಡುವುದಾಗಿ ತಿಳಿಸಿದ್ದರು.
ಹಾಗಾಗಿ ನಿಮ್ಮ ಬ್ಯಾಂಕ್ ಖಾತೆಗಳಿಗೂ ಯೋಜನೆಯ 2,000 ರೂ. ಜಮಾ ಆಗಿದೇಯಾ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ನಿಮಗೆ ಜಮಾ ಆಗಿರುವ ಬಗ್ಗೆ ಬ್ಯಾಂಕ್ನಿಂದ SMS ಬಂದಿರಬಹುದು ಅಥವಾ ನೀವೇ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ನೋಡಿ ತಿಳಿಯಬಹುದು.
ಜಮಾ ಆಗದೇ ಇದ್ದಲ್ಲಿ ಮತ್ತೊಂದಿಷ್ಟು ದಿನ ಕಾಯಬೇಕಾಗುತ್ತದೆ. ಹೊಸ ವರ್ಷದ ಸಂದರ್ಭದಲ್ಲಾದರೂ ಹಣ ಜಮಾ ಆದರೇ ಖುಷಿಯ ಸಂಗತಿ.
ಈ ಯೋಜನೆಯ ಮೂಲಕ ತಿಂಗಳಿಗೆ 2,000 ರೂ. ಅಂತೆ ಅರ್ಹ ಮನೆ ಯಜಮಾನಿ ಮಹಿಳೆಯರಿಗೆ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡುವ ಯೋಜನೆ ದೇಶದಲ್ಲೇಡೆ ಮಾದರಿಯಾಗಿದೆ.
ಬೇರೆ ಬೇರೆ ರಾಜ್ಯಗಳಲ್ಲಿ ಗೃಹಲಕ್ಷ್ಮೀ ಯೋಜನೆಯ ಮಾದರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಚುನಾವಣೆ ಸಂದರ್ಭದಲ್ಲಿ ಯೋಜನೆಯನ್ನು ಘೋಷನೆ ಮಾಡಿ, ಭರ್ಜರಿ ಗೆಲುವನ್ನು ಸಾಧಿಸಿವೆ.
ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 24 ನೇ ಕಂತಿನ ಹಣ ಜಮಾ ಆಗಿದೆಯಾ ಎಂಬುದನ್ನು DBT Status ಚೆಕ್ ಮೂಲಕ ನೋಡಿಕೊಳ್ಳಬಹುದು.
ಇತರೆ ಮಾಹಿತಿಗಳನ್ನು ಓದಿ:
Cibil Score New Rules: ಸಿಬಿಲ್ ಸ್ಕೋರ್ ಇಲ್ಲವೆಂದು ಸಾಲ ಸಿಗುತ್ತಿಲ್ಲವೇ? ಚಿಂತೆ ಬಿಡಿ
Udyogini Scheme: 1.5 ಲಕ್ಷ ರೂ. ಸಹಾಯಧನಕ್ಕೆ ಆನ್ಲೈನ್ ಅರ್ಜಿ ಆಹ್ವಾನ