GTTC Admission 2026-27: 10ನೇ ತರಗತಿ ಪಾಸಾದವರಿಗೆ ಡಿಪ್ಲೋಮಾ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ

Telegram Group Join Now
WhatsApp Group Join Now

10ನೇ ತರಗತಿ (SSLC) ಮುಗಿಸಿ, ತಕ್ಷಣವೇ ಉದ್ಯೋಗ ಆಧಾರಿತ ಕೌಶಲ್ಯ ತರಬೇತಿ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ‘ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ’ (GTTC) ಸುವರ್ಣಾವಕಾಶವೊಂದನ್ನು ಒದಗಿಸಿದೆ.

ರಾಜ್ಯಾದ್ಯಂತ ಇರುವ 32 ಜಿಟಿಟಿಸಿ ಕೇಂದ್ರಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯವಿರುವ 100% ಕೌಶಲ್ಯಾಧಾರಿತ ತರಬೇತಿಯನ್ನು (70% ಪ್ರಾಯೋಗಿಕ ಮತ್ತು 30% ಸೈದ್ಧಾಂತಿಕ) ಈ ಕೇಂದ್ರಗಳಲ್ಲಿ ನೀಡಲಾಗುತ್ತದೆ.

ಡಿಪ್ಲೋಮಾ ಕೋರ್ಸ್‌ಗಳು ವಿವರ:
ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗುಣವಾಗಿ ಈ ಕೆಳಗಿನ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು:

  • ಟೂಲ್ ಅಂಡ್ ಡೈ ಮೇಕಿಂಗ್ (Tool & Die Making)
  • ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ (Precision Manufacturing)
  • ಮೆಕಾಟ್ರಾನಿಕ್ಸ್ (Mechatronics)
  • ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ (Electronics & Communication)
  • ಆಟೋಮೇಷನ್ ಅಂಡ್ ರೊಬೊಟಿಕ್ಸ್ (Automation & Robotics)
  • ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅಂಡ್ ಮಷಿನ್ ಲರ್ನಿಂಗ್ (AI & ML)
  • ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (Electrical & Electronics Engineering)

ಅರ್ಹತೆ:

  • 10ನೇ ತರಗತಿ (SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಈ ಡಿಪ್ಲೋಮಾ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.

30,000 ರೂ. ವರೆಗೆ ಸ್ಟೈಪೆಂಡ್ ಸೌಲಭ್ಯ:
ಜಿಟಿಟಿಸಿ (GTTC) ಕೋರ್ಸ್‌ಗಳ ಬಹುದೊಡ್ಡ ವಿಶೇಷತೆಯೆಂದರೆ ‘ಇನ್-ಪ್ಲಾಂಟ್ ತರಬೇತಿ’ (In-plant training). ತರಬೇತಿಯ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿಗೆ ಕನಿಷ್ಠ 18,000 ರೂ. ಗಳಿಂದ ಗರಿಷ್ಠ 30,000 ರೂ. ವರೆಗೆ ಸ್ಟೈಪೆಂಡ್ (ಶಿಷ್ಯವೇತನ) ಸೌಲಭ್ಯವನ್ನು ನೀಡಲಾಗುತ್ತದೆ. ಇದು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸದ ಖರ್ಚನ್ನು ತಾವೇ ಭರಿಸಲು ದೊಡ್ಡ ನೆರವಾಗಲಿದೆ.

ಆಯ್ಕೆ ವಿಧಾನ:
ಯಾವುದೇ ಪ್ರವೇಶ ಪರೀಕ್ಷೆ ಇರುವುದಿಲ್ಲ. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಿ, ಅವರ 10ನೇ ತರಗತಿಯ ಅಂಕಗಳ ಆಧಾರದ ಮೇಲೆ ‘ಮೆರಿಟ್ ಕಮ್ ರೋಸ್ಟರ್’ (Merit cum Roster) ನಿಯಮದನ್ವಯ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ.

ಪ್ರವೇಶಾತಿಯ ಪ್ರಮುಖ ದಿನಾಂಕಗಳು:

  • ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ: 24-04-2026
  • 1ನೇ ಸುತ್ತಿನ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 10-05-2026
  • ದಾಖಲಾತಿಗಳ ಪರಿಶೀಲನೆ: 27-04-2026 ರಿಂದ 12-05-2026
  • ಅಣುಕು ಸೀಟು ಹಂಚಿಕೆ (Mock Allotment) ಫಲಿತಾಂಶ: 14-05-2026
  • 1ನೇ ಸುತ್ತಿನ ಅಧಿಕೃತ ಸೀಟು ಹಂಚಿಕೆ ಮತ್ತು ಪ್ರವೇಶಾತಿ: 15-05-2026 ರಿಂದ 20-05-2026
  • 2ನೇ ಸುತ್ತಿನ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 23-05-2026

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ವಿದ್ಯಾರ್ಥಿಗಳು ಜಿಟಿಟಿಸಿಯ ಅಧಿಕೃತ ವೆಬ್‌ಸೈಟ್ gttc.karnataka.gov.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ SSLC ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ ಮುಂತಾದ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

GTTC Admission 2026-27 Application Link:

(ಹೆಚ್ಚಿನ ಮಾಹಿತಿ ಹಾಗೂ ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ: 155267 ಅನ್ನು ಸಂಪರ್ಕಿಸಬಹುದು).

1st PUC Free Admission 2026: ಪ್ರಥಮ ಪಿಯುಸಿ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಹೈಕೋರ್ಟ್ ನೇಮಕಾತಿ 2026

8000 ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ 2026, ವಾರದಲ್ಲಿ ಅಧಿಸೂಚನೆ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment