ಅಂಗನವಾಡಿ ನೇಮಕಾತಿ 2024; ಅರ್ಜಿ ಸಲ್ಲಿಸಿ | Karnataka Anganwadi Teacher Recruitment 2024 Apply Online

Telegram Group Join Now
WhatsApp Group Join Now

ಹಾಸನ, ಬಳ್ಳಾರಿ ಹಾಗೂ ದಾವಣಗೆರೆ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಸೂಚನೆ (Anganwadi Teacher Recruitment) ಯನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Anganwadi Teacher Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD)
ವೇತನ ಶ್ರೇಣಿ: ಅಧಿಸೂಚನೆ ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 734+141+237
ಉದ್ಯೋಗ ಸ್ಥಳ: ಹಾಸನ, ಬಳ್ಳಾರಿ ಹಾಗೂ ದಾವಣಗೆರೆ.

ಹುದ್ದೆಗಳ ವಿವರ:
ಹಾಸನ ಜಿಲ್ಲೆ:
ಅಂಗನವಾಡಿ ಕಾರ್ಯಕರ್ತೆ – 168 ಹುದ್ದೆಗಳು
ಅಂಗನವಾಡಿ ಸಹಾಯಕಿ – 566 ಹುದ್ದೆಗಳು

ಬಳ್ಳಾರಿ ಜಿಲ್ಲೆ:
ಅಂಗನವಾಡಿ ಕಾರ್ಯಕರ್ತೆ – 22 ಹುದ್ದೆಗಳು
ಅಂಗನವಾಡಿ ಸಹಾಯಕಿ – 119 ಹುದ್ದೆಗಳು

ದಾವಣಗೆರೆ ಜಿಲ್ಲೆ:
ಅಂಗನವಾಡಿ ಕಾರ್ಯಕರ್ತೆ – 39 ಹುದ್ದೆಗಳು
ಅಂಗನವಾಡಿ ಸಹಾಯಕಿ – 198 ಹುದ್ದೆಗಳು

ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ – 12th ಪಾಸಾಗಿರಬೇಕು.
ಅಂಗನವಾಡಿ ಸಹಾಯಕಿ – 10 ನೇ ತರಗತಿ ಪೂರ್ಣಗೊಳಸಿರಬೇಕು.

ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ನಿಯಮಗಳ ಪ್ರಕಾರ ಹುದ್ದೆಗಳಿಗೆ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿರುತ್ತದೆ.

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

Anganwadi Teacher Recruitment 2024 ಪ್ರಮುಖ ದಿನಾಂಕಗಳು:

ಹಾಸನ ಜಿಲ್ಲೆಯ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-08-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-09-2024

ಬಳ್ಳಾರಿ ಜಿಲ್ಲೆಯ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-08-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-09-2024

ದಾವಣಗೆರೆ ಜಿಲ್ಲೆಯ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-08-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 09-09-2024

ಪ್ರಮುಖ ಲಿಂಕ್’ಗಳು:
ಹಾಸನ ಅಂಗನವಾಡಿ ಅಧಿಸೂಚನೆ: ಡೌನ್’ಲೋಡ್
ಬಳ್ಳಾರಿ ಅಂಗನವಾಡಿ ಅಧಿಸೂಚನೆ: ಡೌನ್’ಲೋಡ್
ದಾವಣಗೆರೆ ಅಂಗನವಾಡಿ ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnemakaone.kar.nic.in

ಇತರೆ ಮಾಹಿತಿಗಳನ್ನು ಓದಿ:

ಇಂಡಿಯನ್ ಬ್ಯಾಂಕ್ ನೇಮಕಾತಿ 2024

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment