ತೋಟಗಾರಿಕೆ ಇಲಾಖೆಯ ಉಳಿಕೆ ಮೂಲ ವೃಂದ (RPC) ಮತ್ತು ಕಲ್ಯಾಣ-ಕರ್ನಾಟಕ ವೃಂದದಲ್ಲಿ (KK) ಖಾಲಿ ಇರುವ ಗ್ರೂಪ್-ಬಿ ವೃಂದದ ‘ಸಹಾಯಕ ತೋಟಗಾರಿಕೆ ನಿರ್ದೇಶಕರು’ ಹಾಗೂ ‘ಸಹಾಯಕ ತೋಟಗಾರಿಕೆ ಅಧಿಕಾರಿ’ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಸೂಚನೆ ಪ್ರಕಟಿಸಲಾಗಿದೆ.
ಉಳಿಕೆ ಮೂಲ ವೃಂದ (RPC) ಮತ್ತು ಕಲ್ಯಾಣ ಕರ್ನಾಟಕ (KK) ವೃಂದಗಳೆರಡರ ಹುದ್ದೆಗಳಿಗೂ ಪ್ರತ್ಯೇಕ ಅಧಿಸೂಚನೆ ಪ್ರಕಟಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸಂಕ್ಷಿಪ್ತ ವಿವರ
- ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
- ಇಲಾಖೆ: ತೋಟಗಾರಿಕೆ ಇಲಾಖೆ
- ಹುದ್ದೆಯ ಹೆಸರು: ಸಹಾಯಕ ತೋಟಗಾರಿಕೆ ನಿರ್ದೇಶಕರು ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿ
- ಒಟ್ಟು ಹುದ್ದೆಗಳ ಸಂಖ್ಯೆ: 85 ಹುದ್ದೆಗಳು (RPC: 80, KK: 05)
- ಉದ್ಯೋಗ ಸ್ಥಳ: ಕರ್ನಾಟಕ
- ವೇತನ ಶ್ರೇಣಿ: ರೂ. 65,950 ದಿಂದ ರೂ. 1,34,200/- ರವರೆಗೆ (ಹುದ್ದೆಗೆ ಅನುಗುಣವಾಗಿ)
Horticulture Department Recruitment 2026 ಹುದ್ದೆಗಳ ವಿವರ:
ಈ ನೇಮಕಾತಿಯು ಒಟ್ಟು 85 ಹುದ್ದೆಗಳಿಗೆ ನಡೆಯಲಿದ್ದು, ವೃಂದವಾರು ಹುದ್ದೆಗಳ ವಿವರ ಈ ಕೆಳಗಿನಂತಿದೆ:
ಉಳಿಕೆ ಮೂಲ ವೃಂದ (RPC) – ಒಟ್ಟು 80 ಹುದ್ದೆಗಳು:
- ಸಹಾಯಕ ತೋಟಗಾರಿಕೆ ಅಧಿಕಾರಿ: 75 ಹುದ್ದೆಗಳು.
- ಸಹಾಯಕ ತೋಟಗಾರಿಕೆ ನಿರ್ದೇಶಕರು: 05 ಹುದ್ದೆಗಳು.
ಕಲ್ಯಾಣ-ಕರ್ನಾಟಕ ವೃಂದ (KK) – ಒಟ್ಟು 05 ಹುದ್ದೆಗಳು:
- ಸಹಾಯಕ ತೋಟಗಾರಿಕೆ ನಿರ್ದೇಶಕರು: 05 ಹುದ್ದೆಗಳು.
ಶೈಕ್ಷಣಿಕ ವಿದ್ಯಾರ್ಹತೆ:
- ಸಹಾಯಕ ತೋಟಗಾರಿಕೆ ಅಧಿಕಾರಿ: ಭಾರತದಲ್ಲಿ ಕಾನೂನುಬದ್ಧವಾಗಿ ಸ್ಥಾಪಿತವಾದ ಮತ್ತು ICAR (Indian Council of Agriculture Research) ನಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ತೋಟಗಾರಿಕೆಯಲ್ಲಿ ಪದವಿ (Graduate in Horticulture) ಪಡೆದಿರಬೇಕು.
- ಸಹಾಯಕ ತೋಟಗಾರಿಕೆ ನಿರ್ದೇಶಕರು: ICAR ನಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ತೋಟಗಾರಿಕೆಯಲ್ಲಿ ಬಿ.ಎಸ್ಸಿ (B.Sc. in Horticulture) ಜೊತೆಗೆ ತೋಟಗಾರಿಕೆಯಲ್ಲಿ ಸ್ನಾತಕೋತ್ತರ ಪದವಿ (Post Graduate Degree in Horticulture) ಹೊಂದಿರಬೇಕು.
ವೇತನ ವಿವರ:
- ಸಹಾಯಕ ತೋಟಗಾರಿಕೆ ಅಧಿಕಾರಿ: ರೂ. 65,950 ರಿಂದ 1,24,900 ವರೆಗೆ.
- ಸಹಾಯಕ ತೋಟಗಾರಿಕೆ ನಿರ್ದೇಶಕರು: ರೂ. 69,250 ರಿಂದ 1,34,200 ವರೆಗೆ.
ವಯೋಮಿತಿ ಸಡಿಲಿಕೆ: ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳು ತುಂಬಿರಬೇಕು. ಸರ್ಕಾರದ ಆದೇಶದಂತೆ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಅನ್ವಯವಾಗುವಂತೆ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದ್ದು, ವಯೋಮಿತಿ ಈ ಕೆಳಗಿನಂತಿದೆ:
- ಸಾಮಾನ್ಯ ವರ್ಗದ (GM) ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷಗಳು.
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 43 ವರ್ಷಗಳು.
- ಪರಿಶಿಷ್ಟ ಜಾತಿ (SC) / ಪರಿಶಿಷ್ಟ ಪಂಗಡ (ST) / ಪ್ರವರ್ಗ-1 ಅಭ್ಯರ್ಥಿಗಳಿಗೆ: ಗರಿಷ್ಠ 45 ವರ್ಷಗಳು.
ಅರ್ಜಿ ಶುಲ್ಕ:
- ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (2A, 2B, 3A, 3B): ರೂ. 750/- (ರೂ.500 ಅರ್ಜಿ ಶುಲ್ಕ + 250 ಪ್ರಕ್ರಿಯೆ ಶುಲ್ಕ).
- ಪ.ಜಾ / ಪ.ಪಂ / ಪ್ರವರ್ಗ-1 / ಮಾಜಿ ಸೈನಿಕ / ತೃತೀಯ ಲಿಂಗದ ಅಭ್ಯರ್ಥಿಗಳು: ರೂ. 500/- (ರೂ.250 ಅರ್ಜಿ ಶುಲ್ಕ + 250 ಪ್ರಕ್ರಿಯೆ ಶುಲ್ಕ).
- ವಿಶೇಷ ಚೇತನ ಅಭ್ಯರ್ಥಿಗಳಿಗೆ: ರೂ. 250/- (ಪ್ರಕ್ರಿಯೆ ಶುಲ್ಕ ಮಾತ್ರ).
- ಸಹಾಯಕ ತೋಟಗಾರಿಕೆ ಅಧಿಕಾರಿ ಮತ್ತು ನಿರ್ದೇಶಕರು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಒಂದೇ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು, ಹೆಚ್ಚುವರಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ರೂ. 100 ನ್ನು ಹೆಚ್ಚುವರಿ ಅರ್ಜಿ ಶುಲ್ಕವಾಗಿ ಪಾವತಿಸತಕ್ಕದ್ದು.
- ಶುಲ್ಕವನ್ನು ಕೇವಲ ಆನ್‌ಲೈನ್ ಮೂಲಕ ಮಾತ್ರ ಪಾವತಿಸಬೇಕು.
ಪ್ರಮುಖ ದಿನಾಂಕಗಳು:
- ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 05-08-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-08-2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ: 31-08-2026
KEA Horticulture Department Recruitment 2026 ಪ್ರಮುಖ ಲಿಂಕ್‌ಗಳು
- ಅಧಿಕೃತ ಅಧಿಸೂಚನೆ (RPC PDF): ಡೌನ್‌ಲೋಡ್
- ಅಧಿಕೃತ ಅಧಿಸೂಚನೆ (KKR PDF): ಡೌನ್‌ಲೋಡ್
- ಆನ್‌ಲೈನ್ ಅರ್ಜಿ ಸಲ್ಲಿಕೆ ಲಿಂಕ್ (Non-HK): Apply Online
- ಆನ್‌ಲೈನ್ ಅರ್ಜಿ ಸಲ್ಲಿಕೆ ಲಿಂಕ್ (HK): Apply Online
- ಅಧಿಕೃತ ವೆಬ್‌ಸೈಟ್: cetonline.karnataka.gov.in/kea
ಈ ಕೇಳಗಿನ ಸುದ್ದಿಗಳನ್ನು ಓದಿ: