ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ, ಕರ್ನಾಟಕ ಲೋಕಸೇವಾ ಆಯೋಗವು (KPSC) 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು (PDO Result 2025 – Provisional Selection List) ಬುಧವಾರ (ಡಿ.17) ಪ್ರಕಟಿಸಿದೆ.
ಆಯೋಗವು ತನ್ನ ಅಧಿಕೃತ ಪ್ರಕಟಣೆಯಲ್ಲಿ ಈ ವಿಷಯವನ್ನು ತಿಳಿಸಿದ್ದು, ಅಭ್ಯರ್ಥಿಗಳು ಆಯೋಗದ ಜಾಲತಾಣದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ನೇಮಕಾತಿ ವಿವರ: 2023-24 ನೇ ಸಾಲಿನಲ್ಲಿ ಅಧಿಸೂಚಿಸಲಾಗಿದ್ದ (ದಿನಾಂಕ: 15-03-2024 ಮತ್ತು ತಿದ್ದುಪಡಿ ದಿನಾಂಕ: 17-09-2024) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 97 ಪಿಡಿಒ (HK-ಹೈದ್ರಾಬಾದ್-ಕರ್ನಾಟಕ) ಹುದ್ದೆಗಳಿಗೆ ಸಂಬಂಧಿಸಿದಂತೆ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
PDO Result 2025 Download PDF:
ಫಲಿತಾಂಶ ನೋಡುವುದು ಹೇಗೆ? ಅಭ್ಯರ್ಥಿಗಳು ಕೆಪಿಎಸ್ಸಿ ಅಧಿಕೃತ ವೆಬ್ಸೈಟ್ http://kpsc.kar.nic.in ಗೆ ಭೇಟಿ ನೀಡಿ, ‘Lists’ ವಿಭಾಗದಲ್ಲಿರುವ ‘Provisional Selection List’ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಆಯ್ಕೆಪಟ್ಟಿಯನ್ನು ಪರಿಶೀಲಿಸಬಹುದು.
ಆಕ್ಷೇಪಣೆಗೆ 7 ದಿನಗಳ ಕಾಲಾವಕಾಶ: ಪ್ರಕಟಿಸಲಾದ ಈ ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಪಟ್ಟಿ ಪ್ರಕಟವಾದ ದಿನಾಂಕದಿಂದ 07 ದಿನಗಳ ಒಳಗಾಗಿ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನಿಗದಿತ ದಿನಾಂಕದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಆಯೋಗದ ಕಾರ್ಯದರ್ಶಿಗಳು ಸ್ಪಷ್ಟಪಡಿಸಿದ್ದಾರೆ.
ವಿಳಾಸ: ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001.
ಇತರೆ ಮಾಹಿತಿಗಳನ್ನು ಓದಿ:
KVS Recruitment 2025: ಬೋಧಕ-ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ!