PDO Result 2025: PDO 1:1 ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ; ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಫಲಿತಾಂಶ ಡೌನ್‌ಲೋಡ್‌ ಮಾಡಿಕೊಳ್ಳಿ

Telegram Group Join Now
WhatsApp Group Join Now

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ, ಕರ್ನಾಟಕ ಲೋಕಸೇವಾ ಆಯೋಗವು (KPSC) 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು (PDO Result 2025 – Provisional Selection List) ಬುಧವಾರ (ಡಿ.17) ಪ್ರಕಟಿಸಿದೆ.

ಆಯೋಗವು ತನ್ನ ಅಧಿಕೃತ ಪ್ರಕಟಣೆಯಲ್ಲಿ ಈ ವಿಷಯವನ್ನು ತಿಳಿಸಿದ್ದು, ಅಭ್ಯರ್ಥಿಗಳು ಆಯೋಗದ ಜಾಲತಾಣದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ನೇಮಕಾತಿ ವಿವರ: 2023-24 ನೇ ಸಾಲಿನಲ್ಲಿ ಅಧಿಸೂಚಿಸಲಾಗಿದ್ದ (ದಿನಾಂಕ: 15-03-2024 ಮತ್ತು ತಿದ್ದುಪಡಿ ದಿನಾಂಕ: 17-09-2024) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 97 ಪಿಡಿಒ (HK-ಹೈದ್ರಾಬಾದ್-ಕರ್ನಾಟಕ) ಹುದ್ದೆಗಳಿಗೆ ಸಂಬಂಧಿಸಿದಂತೆ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

PDO Result 2025 Download PDF:

ಫಲಿತಾಂಶ ನೋಡುವುದು ಹೇಗೆ? ಅಭ್ಯರ್ಥಿಗಳು ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್ http://kpsc.kar.nic.in ಗೆ ಭೇಟಿ ನೀಡಿ, ‘Lists’ ವಿಭಾಗದಲ್ಲಿರುವ ‘Provisional Selection List’ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಆಯ್ಕೆಪಟ್ಟಿಯನ್ನು ಪರಿಶೀಲಿಸಬಹುದು.

ಆಕ್ಷೇಪಣೆಗೆ 7 ದಿನಗಳ ಕಾಲಾವಕಾಶ: ಪ್ರಕಟಿಸಲಾದ ಈ ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಪಟ್ಟಿ ಪ್ರಕಟವಾದ ದಿನಾಂಕದಿಂದ 07 ದಿನಗಳ ಒಳಗಾಗಿ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನಿಗದಿತ ದಿನಾಂಕದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಆಯೋಗದ ಕಾರ್ಯದರ್ಶಿಗಳು ಸ್ಪಷ್ಟಪಡಿಸಿದ್ದಾರೆ.

ವಿಳಾಸ: ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001.

1600 PSI ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ; ಗೃಹ ಸಚಿವ

KVS Recruitment 2025: ಬೋಧಕ-ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ!

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment