ಮೆಟ್ರಿಕ್ ನಂತರದ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | Post-Matric Hostel Application 2026 Karnataka Apply Online

Telegram Group Join Now
WhatsApp Group Join Now

ಉನ್ನತ ವ್ಯಾಸಂಗ ಮಾಡುತ್ತಿರುವ ರಾಜ್ಯದ ಬಡ ಹಾಗೂ ಹಿಂದುಳಿದ ವರ್ಗದ ಗ್ರಾಮೀಣ ಪ್ರದೇಶದಿಂದ ದೂರದ ನಗರ ಮತ್ತು ಪಟ್ಟಣಗಳಿಗೆ ಬಂದು ಓದುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗದಿರಲಿ ಎಂಬ ಸದುದ್ದೇಶದಿಂದ ಉಚಿತ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

2026-27 ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ‘ಮೆಟ್ರಿಕ್-ನಂತರದ’ (Post-Matric) ಉಚಿತ ವಸತಿ ನಿಲಯಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.

ಸುರಕ್ಷಿತ ವಾಸ, ಊಟ, ಗ್ರಂಥಾಲಯ ಸೌಲಭ್ಯ ಸೇರಿದಂತೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಪೂರಕವಾದ ವಾತಾವರಣವನ್ನು ಈ ಸರ್ಕಾರಿ ಹಾಸ್ಟೆಲ್‌ಗಳು ಕಲ್ಪಿಸಿಕೊಡುತ್ತವೆ. ಈ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳು ಅಧಿಕೃತ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.

ಶೈಕ್ಷಣಿಕ ಅರ್ಹತೆ: ಎಸ್‌ಎಸ್‌ಎಲ್‌ಸಿ ಹಂತವನ್ನು ಯಶಸ್ವಿಯಾಗಿ ಪೂರೈಸಿ, ಪ್ರಸ್ತುತ ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ (Degree) ಹಾಗೂ ಸ್ನಾತಕೋತ್ತರ ಪದವಿ (PG/Master’s Degree) ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿಭಾಗದಡಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಸಮಾಜ ಕಲ್ಯಾಣ ಇಲಾಖೆಯ ಈ ವಸತಿ ನಿಲಯಗಳು ಪ್ರಮುಖವಾಗಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ವರ್ಗದ ವಿದ್ಯಾರ್ಥಿಗಳು ಮೊದಲ ಆದ್ಯತೆಯ ಮೇರೆಗೆ ಅರ್ಜಿ ಸಲ್ಲಿಸಬಹುದು. (ಇದರ ಜೊತೆಗೆ, ಸರ್ಕಾರದ ನಿಯಮಾನುಸಾರ ಹಿಂದುಳಿದ ವರ್ಗ (OBC) ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೂ ನಿಗದಿತ ಶೇಕಡಾವಾರು ಸೀಟುಗಳನ್ನು ಮೀಸಲಿಡಲಾಗುತ್ತದೆ).

ಅಗತ್ಯ ದಾಖಲೆಗಳು:

  1. SSP Student ID: ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (State Scholarship Portal) ಗುರುತಿನ ಸಂಖ್ಯೆ.
  2. University Registration Number: ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುತ್ತದೆ.
  3. ಜಾತಿ ಮತ್ತು ಆದಾಯ ಪ್ರಮಾಣಪತ್ರ: ಈ ಪ್ರಮಾಣಪತ್ರವು ಕಡ್ಡಾಯವಾಗಿ ವಿದ್ಯಾರ್ಥಿಯ ಹೆಸರಿನಲ್ಲೇ ಇರಬೇಕು. ಅರ್ಜಿ ಭರ್ತಿ ಮಾಡುವಾಗ ಇದರ ‘RD ಸಂಖ್ಯೆ’ಯನ್ನು ನಮೂದಿಸಬೇಕು.
  4. ಆಧಾರ್ ಕಾರ್ಡ್: ವಿದ್ಯಾರ್ಥಿಯ ವಿವರಗಳಿರುವ ಆಧಾರ್.
  5. ಮೊಬೈಲ್ ಸಂಖ್ಯೆ ಹಾಗೂ ವಿಳಾಸ: ಸಂಪರ್ಕಕ್ಕಾಗಿ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ವಿದ್ಯಾರ್ಥಿಯ ಖಾಯಂ ವಿಳಾಸ.

e-KYC ಕಡ್ಡಾಯ: ಹಾಸ್ಟೆಲ್ ಪ್ರವೇಶ ಪ್ರಕ್ರಿಯೆಯನ್ನು ದೋಷರಹಿತವಾಗಿಸಲು, ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್‌ಗೆ ಇ-ಕೆವೈಸಿ (e-KYC) ಮಾಡಿಸಿರುವುದನ್ನು ಇಲಾಖೆ ಕಡ್ಡಾಯಗೊಳಿಸಿದೆ.

ನಿಮ್ಮ ಆಧಾರ್‌ಗೆ ಬಯೋಮೆಟ್ರಿಕ್ (Biometric) ಮತ್ತು ಪ್ರಸ್ತುತ ಬಳಕೆಯಲ್ಲಿರುವ ಮೊಬೈಲ್ ಸಂಖ್ಯೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಂಡ ನಂತರವೇ ಆನ್‌ಲೈನ್ ಪ್ರಕ್ರಿಯೆಯನ್ನು ಆರಂಭಿಸಿ. ಒಂದು ವೇಳೆ ಅಪ್‌ಡೇಟ್ ಆಗಿಲ್ಲದಿದ್ದರೆ, ಕೂಡಲೇ ಸಮೀಪದ ಆಧಾರ್ ಸೇವಾ ಕೇಂದ್ರಕ್ಕೆ ತೆರಳಿ ಸರಿಪಡಿಸಿಕೊಳ್ಳಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2026

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಲಿಂಕ್: ವಿದ್ಯಾರ್ಥಿಗಳು ಇಲಾಖೆಯ ವಸತಿ ನಿಲಯ ನಿರ್ವಹಣಾ ವ್ಯವಸ್ಥೆಯ ಅಧಿಕೃತ ಪೋರ್ಟಲ್ swdhmis.karnataka.gov.in ಗೆ ಭೇಟಿ ನೀಡಿ, ‘Post Metric’ ಆಯ್ಕೆಯನ್ನು ಕ್ಲಿಕ್ ಮಾಡುವ ಮೂಲಕ ತಮ್ಮ ವಿವರಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು. ಸಹಾಯವಾಣಿ (24×7): ಹೆಚ್ಚಿನ ಮಾಹಿತಿ ಅಥವಾ ತಾಂತ್ರಿಕ ಸಹಾಯಕ್ಕಾಗಿ 94823 00400 ಅನ್ನು ಸಂಪರ್ಕಿಸಬಹುದು.

SSLC Prize Money 2026: SSLC ಪಾಸಾದ ವಿದ್ಯಾರ್ಥಿಗಳಿಗೆ 15,000 ರೂ. ಪ್ರೋತ್ಸಾಹಧನ

Diploma Admission 2026: ಸರ್ಕಾರಿ ಪಾಲಿಟೆಕ್ನಿಕ್ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Free Coaching 2026: IAS, KAS ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಸರ್ಕಾರಿ ನರ್ಸಿಂಗ್ (GNM) ಕೋರ್ಸ್‌ ಪ್ರವೇಶಾತಿಗೆ ಅರ್ಜಿ ಆಹ್ವಾನ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment