SSLC Prize Money 2026: SSLC ಪಾಸಾದ ವಿದ್ಯಾರ್ಥಿಗಳಿಗೆ 15,000 ರೂ. ಪ್ರೋತ್ಸಾಹಧನ; ಆನ್‌ಲೈನ್ ಅರ್ಜಿ ಆಹ್ವಾನ

Telegram Group Join Now
WhatsApp Group Join Now

2026 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೀಡುವ ‘ಎಸ್‌ಎಸ್‌ಎಲ್‌ಸಿ ಪ್ರೋತ್ಸಾಹಧನ’ಕ್ಕಾಗಿ (SSLC Prize Money 2026) ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರೋತ್ಸಾಹಧನದ ಮೊತ್ತದ ವಿವರ:

ವಿದ್ಯಾರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಪ್ರೋತ್ಸಾಹಧನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:

  • ಶೇ. 60% ರಿಂದ 74.99% ಅಂಕ ಪಡೆದರೆ: ₹7,000/-
  • ಶೇ. 75% ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದರೆ: ₹15,000/-
  • ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ (District Topper): ₹1,00,000/-

ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ಪ್ರಮುಖ ಸೂಚನೆಗಳು:

  1. ಆಧಾರ್ ಲಿಂಕ್ ಕಡ್ಡಾಯ: ಪ್ರೋತ್ಸಾಹಧನದ ಮೊತ್ತವನ್ನು ನೇರವಾಗಿ ವಿದ್ಯಾರ್ಥಿಯ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ (NPCI ಮ್ಯಾಪ್ ಮಾಡಲಾದ ಬ್ಯಾಂಕ್ ಖಾತೆಗೆ) ಜಮಾ ಮಾಡಲಾಗುತ್ತದೆ.
  2. ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ, ಯಾವುದೇ ಕಾರಣಕ್ಕೂ ಬ್ಯಾಂಕ್ ಅಥವಾ ಆಧಾರ್ ವಿವರಗಳನ್ನು ಬದಲಾವಣೆ ಮಾಡಬಾರದು.
  3. ಆಧಾರ್‌ಗೆ ಲಿಂಕ್ ಮಾಡಿರುವ ಬ್ಯಾಂಕ್ ಖಾತೆಯು ಕಡ್ಡಾಯವಾಗಿ ಸಕ್ರಿಯ (ACTIVE) ಸ್ಥಿತಿಯಲ್ಲಿ ಇರಬೇಕು.

How To Apply SSLC Prize Money 2026:

  • ಹಂತ 1: ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹಾಗೂ ‘Register’ ಮೇಲೆ ಕ್ಲಿಕ್ ಮಾಡಿ.
  • ಹಂತ 2: ಯೋಜನೆಯನ್ನು ಆಯ್ಕೆ ಮಾಡಿ: “SSLC Prize Money”.
  • ಹಂತ 3: ವಿದ್ಯಾರ್ಥಿಯ ಆಧಾರ್ ಸಂಖ್ಯೆಯನ್ನು ನಮೂದಿಸಿ ಹಾಗೂ ಮೊಬೈಲ್‌ಗೆ ಬರುವ ಓಟಿಪಿ (OTP) ಮೂಲಕ ಪರಿಶೀಲನೆ ಮಾಡಿ.
  • ಹಂತ 4: ಜಾತಿ ಮತ್ತು ಆದಾಯ (Caste and Income) ವಿವರಗಳನ್ನು ಭರ್ತಿ ಮಾಡಿ.
  • ಹಂತ 5: ಕೊನೆಯದಾಗಿ, SSLC ವಿವರಗಳನ್ನು (ರಿಜಿಸ್ಟರ್ ನಂಬರ್ ಇತ್ಯಾದಿ) ನಮೂದಿಸಿ ಅರ್ಜಿಯನ್ನು ಸಲ್ಲಿಸಿ (Submit).

ಅರ್ಜಿ ಸಲ್ಲಿಸುವ ಲಿಂಕ್: ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಈ ಕೆಳಗಿನ ಅಧಿಕೃತ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು:

SSLC Prize Money 2026 Application Link: Apply Online

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಯಾವುದೇ ಗೊಂದಲಗಳಿದ್ದರೆ ಇಲಾಖೆಯ ಸಹಾಯವಾಣಿ ಸಂಖ್ಯೆ 9482300400 ಗೆ ಕರೆ ಮಾಡಬಹುದು ಅಥವಾ ನಿಮ್ಮ ಹತ್ತಿರದ ಜಿಲ್ಲಾ ಸಮಾಜ ಕಲ್ಯಾಣ ಕಚೇರಿಯನ್ನು (District Social Welfare Office) ಸಂಪರ್ಕಿಸಬಹುದು.

ಮೆಟ್ರಿಕ್ ನಂತರದ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಿವೋ ವಿದ್ಯಾರ್ಥಿವೇತನ, 60,000 ರೂ. ಆರ್ಥಿಕ ಸಹಾಯ

ಲೇಬರ್ ಕಾರ್ಡ್ ಇದ್ದವರಿಗೆ ₹60,000 ಉಚಿತ ಸಹಾಯಧನ

ಜಿಲ್ಲಾ ನ್ಯಾಯಾಲಯ ನೇಮಕಾತಿ 2026

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment