ಎಲ್ಲರಿಗೂ ನಮಸ್ಕಾರ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮಗಳಡಿಲ್ಲಿ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಿ ಸರ್ಕಾರದಿಂದ ನೀಡುಲಾಗುವ ವಿದ್ಯಾರ್ಥಿವೇತನ ಲಾಭ ಪಡೆದುಕೊಳ್ಳಬಹುದು.
ವಿದ್ಯಾರ್ಥಿವೇತನ ಮಾಹಿತಿ ಎಲ್ಲಾ ವಿದ್ಯಾರ್ಥಿಗಳಿಗೆ ತಲುಪಲೆಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿವೇತನ ಅಭಿಯಾನ ಶುರು ಮಾಡಿದ್ದಾರೆ.
ಮೆಟ್ರಿಕ್ ಪೂರ್ವ (Pre-Matric) ಮತ್ತು ಮೆಟ್ರಿಕ್ ನಂತರದ (Post-Matric) ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.
SSP Scholarship 2025 For SC Students:
ಯಾವೆಲ್ಲಾ ವಿದ್ಯಾರ್ಥಿವೇತನಗಳು ಲಭ್ಯ? ಸಮಾಜ ಕಲ್ಯಾಣ ಇಲಾಖೆಯು ಈ ಕೆಳಗಿನ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಜಿ ಆಹ್ವಾನಿಸಿದೆ:
- ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ.
- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ: ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಇತ್ಯಾದಿ ವ್ಯಾಸಂಗ ಮಾಡುತ್ತಿರುವವರಿಗೆ.
- ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ: 1 ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಿಶೇಷ ವಿದ್ಯಾರ್ಥಿವೇತನ.
- ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ: ಕಾಲೇಜುಗಳ College Attached Hostel ಇದ್ದು ಓದುತ್ತಿರುವವರಿಗೆ ಮಾಸಿಕ ನಿರ್ವಹಣಾ ವೆಚ್ಚ.
ವಿದ್ಯಾರ್ಥಿವೇತನ ಮತ್ತು ಅರ್ಹತೆ:
- ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ: ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷದ ಒಳಗಿರಬೇಕು.
- ಮ್ಯಾನೇಜ್‌ಮೆಂಟ್ ಕೋಟಾ (ಆಡಳಿತ ಮಂಡಳಿ): ಆಡಳಿತ ಮಂಡಳಿ ಕೋಟಾದಡಿ ಸೀಟು ಪಡೆದ ಎಸ್‌ಸಿ ವಿದ್ಯಾರ್ಥಿಗಳ ಕುಟುಂಬದ ಆದಾಯ ಮಿತಿ ₹10 ಲಕ್ಷದ ಒಳಗಿದ್ದರೆ ಅವರಿಗೂ ವಿದ್ಯಾರ್ಥಿವೇತನ ಸಿಗಲಿದೆ.
- ಮಾಸಿಕ ₹3,500 ಸಹಾಯಧನ: ಮೆಡಿಕಲ್ ಮತ್ತು ಇಂಜಿನಿಯರಿಂಗ್ ಓದುತ್ತಿರುವ, ಕಾಲೇಜು ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳಿಗೆ (ಆದಾಯ 2.50 ಲಕ್ಷದ ಒಳಗೆ) ಪ್ರತಿ ತಿಂಗಳು ₹3,500/- ಗಳ ನಿರ್ವಹಣಾ ವೆಚ್ಚವನ್ನು ಸರ್ಕಾರ ನೀಡಲಿದೆ.
ಬಯೋಮೆಟ್ರಿಕ್ ಇ-ದೃಢೀಕರಣ ಕಡ್ಡಾಯ:
2025-26 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಈ ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಇ-ದೃಢೀಕರಣ (Bio Metric -Authentication) ಮಾಡಿಸುವುದು ಕಡ್ಡಾಯವಾಗಿದೆ.
- ಎಲ್ಲಿ ಮಾಡಿಸಬೇಕು?: ಹತ್ತಿರದ ‘ಗ್ರಾಮ ಒನ್’ (Grama One), ‘ಕರ್ನಾಟಕ ಒನ್’ ಅಥವಾ ತಾಲೂಕು ಸಮಾಜ ಕಲ್ಯಾಣ ಕಚೇರಿಗೆ ಭೇಟಿ ನೀಡಿ ಉಚಿತವಾಗಿ ಮಾಡಿಸಬಹುದು.
- ಇ-ದೃಢೀಕರಣ ಡೆಡ್‌ಲೈನ್: ಈಗಾಗಲೇ ಅರ್ಜಿ ಸಲ್ಲಿಸಿರುವವರು ಬಯೋಮೆಟ್ರಿಕ್ ಮಾಡಲು 15.12.2025 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು – DBT.
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
- ಶಾಲಾ/ಕಾಲೇಜು ಶುಲ್ಕದ ರಸೀದಿ.
- ಹಿಂದಿನ ತರಗತಿಯ ಅಂಕಪಟ್ಟಿ (Marks Card).
- ಬ್ಯಾಂಕ್ ಪಾಸ್‌ಬುಕ್.
- NSP OTR ID: ನ್ಯಾಷನಲ್ ಸ್ಕಾಲರ್‌ಶಿಪ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿರುವ ಐಡಿ.
ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP) ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-01-2026
ಪ್ರಮುಖ ಲಿಂಕ್ ಗಳು:
Online Application Link: ssp.karnataka.gov.in
ಅಧಿಕೃತ ವೆಬ್ ಸೈಟ್: ssp.karnataka.gov.in, ssp.postmatric.karnataka.gov.in
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ 24×7 ಸಹಾಯವಾಣಿ 94823 00400 ಅಥವಾ 9482 300 400 ಗೆ ಕರೆ ಮಾಡಬಹುದು.
ಇತರೆ ಮಾಹಿತಿಗಳನ್ನು ಓದಿ:
NSP Scholarship 2025-26: ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿವೇತನ, ಅರ್ಜಿ ಆಹ್ವಾನ
Govt Scholarship 2025: 5,000 ರೂ. ದಿಂದ 1 ಲಕ್ಷ ರೂ. ವರೆಗೆ ಪ್ರೋತ್ಸಾಹಧನ